ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ
ಚಾಮರಾಜನಗರ

ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ

October 13, 2018

ಹನೂರು:ಟೊಮೋಟೋ ಫಸಲಿನ ಜೊತೆ ಗಾಂಜಾ ಬೆಳೆದಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ರಾಮಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಹನೂರು ಸಮೀಪದ ದೊಮ್ಮನಗದ್ದೆ ನಿವಾಸಿ ಹನುಮನಾಯಕನನ್ನು ಬಂಧಿಸಿ 37 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ರಾಮಾಪುರ ಇನ್ಸ್‍ಪೆಕ್ಟರ್ ಮನೋಜ್‍ಕುಮಾರ್ ಸಿಬ್ಬಂದಿಗಳಾದ ನಾಗೇಂದ್ರ, ರಘು, ರವಿಪ್ರಸಾದ್, ಮನೋಹರ್, ಪ್ರಕಾಶ್ ಪ್ರದೀಪ್, ಮಂಜುನಾಥ್ ದಾಳಿಯಲ್ಲಿ ಭಾಗವಹಿಸಿದರು.

ಖಚಿತ ಮಾಹಿತಿ ದೊರೆತ ಮೇರೆಗೆ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ದೊಮ್ಮನಗದ್ದೆ ಗ್ರಾಮದ ನಿವಾಸಿ ಹನುಮನಾಯಕ ತನ್ನ ಜಮೀನಿನಲ್ಲಿ ಆಕ್ರಮವಾಗಿ ಟಮೋಟೋ ಬೆಳೆ ಜೊತೆ 37 ಗಾಂಜಾ ಗಿಡಗಳನ್ನು ಬೆಳೆದಿದ್ದನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Translate »