ಮಂಡ್ಯ ಲೋಕಸಭಾ ಕ್ಷೇತ್ರದ 22 ಅಭ್ಯರ್ಥಿಗಳ ಭವಿಷ್ಯ  ಸ್ಟ್ರಾಂಗ್‍ರೂಂನಲ್ಲಿ ಭದ್ರ
ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ 22 ಅಭ್ಯರ್ಥಿಗಳ ಭವಿಷ್ಯ  ಸ್ಟ್ರಾಂಗ್‍ರೂಂನಲ್ಲಿ ಭದ್ರ

April 20, 2019

ಮತಯಂತ್ರಗಳಿರುವ ಸರ್ಕಾರಿ ಮಹಾವಿದ್ಯಾಲಯದ ಸುತ್ತ ಬಿಗಿ ಭದ್ರತೆ
ಮಂಡ್ಯ: ಗುರು ವಾರ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾರ ಪ್ರಭು ಬರೆದಿರುವ 22 ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‍ರೂಂನಲ್ಲಿ ಭದ್ರವಾಗಿದೆ.

ಮತದಾನ ಪ್ರಕ್ರಿಯೆ ಮುಗಿದ ಬಳಿಕ ವಿದ್ಯುನ್ಮಾನ ಮತಯಂತ್ರಗಳನ್ನು ಮಂಡ್ಯ ಸರ್ಕಾರಿ ಮಹಾವಿದ್ಯಾಲಯ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್‍ರೂಂನಲ್ಲಿ ಸುರಕ್ಷಿತವಾಗಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಮತದಾನ ಮುಕ್ತಾಯವಾದ ಬಳಿಕ ಆಯಾ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಡೀಮಸ್ಟ ರಿಂಗ್ ಕಾರ್ಯ ನಡೆಸಿ, ವಿದ್ಯುನ್ಮಾನ ಮತ ಯಂತ್ರಗಳನ್ನು (ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿವಿ ಪ್ಯಾಟ್) ಜಿಪಿಎಸ್ ಅಳವಡಿಸಲಾಗಿರುವ ವಾಹನದ ಮೂಲಕ ಸೂಕ್ತ ಪೊಲೀಸ್ ಭದ್ರತೆಯೊಡನೆ ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಕಾಲೇಜಿಗೆ ತಂದು ವಿಧಾನ ಸಭಾ ಕ್ಷೇತ್ರವಾರು ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಪ್ರತ್ಯೇಕವಾಗಿ ಎರಡು ಲಾಕ್ ಸಿಸ್ಟಂನಲ್ಲಿ ಸೀಲ್ ಮಾಡಿ, ಸುರಕ್ಷಿತವಾಗಿ ಇಡಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾಕ್ಷೇತ್ರಗಳಲ್ಲಿ ಸ್ಥಾಪಿಸಲಾಗಿದ್ದ ಒಟ್ಟು 2046 ಮತಗಟ್ಟೆಗಳಲ್ಲಿ ಮತದಾನ ವಾದ ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್‍ಗಳಿಗೆ ಭದ್ರತೆ ಒದಗಿಸಲಾಗಿದೆ.

ಸೆಂಟ್ರಲ್ ಆಮ್ರ್ಡ್ ಪೊಲೀಸ್ ಫೋರ್ಸ್ (ಸಿಎಪಿಎಫ್) ಮತ್ತು ಜಿಲ್ಲಾ ಪೊಲೀಸ್ ಸೇರಿದಂತೆ ರಕ್ಷಣಾ ಸಿಬ್ಬಂದಿ ವರ್ಗದವ ರಿಂದ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಎಲ್ಲಾ ಭದ್ರತಾ ಕೊಠಡಿಗಳ ಹೊರಭಾಗ ದಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸ ಲಾಗಿದೆ. ಮತಯಂತ್ರಗಳ ಸುರಕ್ಷತೆಗಾಗಿ ಮತ್ತು ಭದ್ರತಾ ಕೊಠಡಿ ಸುರಕ್ಷತಾ ವ್ಯವಸ್ಥೆ ಯನ್ನು ವೀಕ್ಷಿಸಲು ಮತ ಎಣಿಕೆ ದಿನ ವಾದ ಮೇ 23 ರವರೆಗೆ ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲು ಮೂರು ಪಾಳಿಯಲ್ಲಿ ಅಧಿಕಾರಿಗಳನ್ನು ನಿಯೋ ಜಿಸಲಾಗಿದೆ.ಪ್ರತಿ ಹಂತ ಮತ್ತು ಸಮಯ ದಲ್ಲಿ ಕಾರ್ಯನಿರ್ವಹಿಸಿದ ಬಗ್ಗೆ ಎಸ್ಪಿ, ಎಎಸ್ಪಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ನಿಷೇಧಾಜ್ಞೆ ಜಾರಿ: ಭದ್ರತೆ ದೃಷ್ಟಿಯಿಂದ ಮಹಾವಿದ್ಯಾಲಯದ ಸುತ್ತಲಿನ 100 ಮೀ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿ ಸಿದ್ದು, ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಸ್ಥಳೀಯ ಪೊಲೀಸರು ಕಾಲೇಜಿನ ಪ್ರವೇಶ ದ್ವಾರಗಳಲ್ಲಿ ಗಸ್ತು ತಿರುಗುತ್ತಾ ಭದ್ರತೆಯ ಮೇಲೆ ಕಟ್ಟೆಚ್ಚರ ವಹಿಸಿದ್ದಾರೆ,ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹಾಕಲಾಗಿದೆ.

1 ಸಿಆರ್‍ಪಿಎಫ್ ತುಕಡಿ, 1 ಕೆಎಸ್ ಆರ್‍ಪಿ ತುಕಡಿ, 3 ಬಿಆರ್‍ಒ ಸಿಬ್ಬಂದಿ ಭದ್ರತಾ ಕೊಠಡಿಗಳನ್ನು ಕಾಯುತ್ತಿದ್ದಾರೆ. ಸರ್ಕಲ್ ಇನ್ಸ್‍ಪೆಕ್ಟರ್, ಸಬ್‍ಇನ್ಸ್‍ಪೆಕ್ಟರ್ ಗಳನ್ನು ಮೂರು ಪಾಳಿಯಲ್ಲಿ ಭದ್ರತೆ ಮೇಲ್ವಿ ಚಾರಣೆಗೆ ನಿಯೋಜನೆ ಮಾಡಲಾಗಿದ್ದು ಕಾಲೇಜಿನ ಸುತ್ತಮುತ್ತ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೇ 23 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯನಡೆಯಲಿದೆ.

Translate »