ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕ ಮಹಿಳೆ ಮೇಲೆ ಹಲ್ಲೆ ಖಂಡಿಸಿ ಕಾರ್ಮಿಕ ಮಹಿಳೆಯರ ಬೃಹತ್ ಪ್ರತಿಭಟನೆ
ಚಾಮರಾಜನಗರ

ಕ್ಷುಲ್ಲಕ ಕಾರಣಕ್ಕೆ ಕಾರ್ಮಿಕ ಮಹಿಳೆ ಮೇಲೆ ಹಲ್ಲೆ ಖಂಡಿಸಿ ಕಾರ್ಮಿಕ ಮಹಿಳೆಯರ ಬೃಹತ್ ಪ್ರತಿಭಟನೆ

July 5, 2018

ಚಾಮರಾಜನಗರ:  ತಾಲೂಕಿನ ಉತ್ತುವಳ್ಳಿ ಗ್ರಾಮದಲ್ಲಿ ಇರುವ ಗಾರ್ಮೆಂಟ್ಸ್‍ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಗಾರ್ಮೆಂ ಟ್ಸ್‍ನ ಸೂಪರ್‍ವೈಸರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆಯನ್ನು ಖಂಡಿಸಿ ಗಾರ್ಮೆಂಟ್ಸ್ ನಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರು ಗಾರ್ಮೆಂಟ್ಸ್ ಮುಂಭಾಗ ಬುಧವಾರ ಬೃಹತ್ ಪ್ರತಿ ಭಟನೆ ನಡೆಸಿದರು.

ಉತ್ತುವಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ (ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ) ಖಾಸಗಿ ಗಾರ್ಮೆಂಟ್ಸ್ ಇದೆ. ಈ ಗಾರ್ಮೆಂಟ್ಸ್ ನಲ್ಲಿ ಹಲವು ಗ್ರಾಮದ ನೂರಾರು ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ಗಾರ್ಮೆಂಟ್ಸ್‍ನಲ್ಲಿ ಚಾಮರಾಜನಗರ ತಾಲೂ ಕಿನ ಮಂಗಲ ಗ್ರಾಮದ ಲಕ್ಷ್ಮಮ್ಮ ಎಂಬ ಮಹಿಳೆ ಸಹ ಕೆಲಸ ನಿರ್ವಹಿಸುತ್ತಿದ್ದರು. ಬಟ್ಟೆ ಐರನ್ ಸರಿಯಾಗಿ ಮಾಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗಾರ್ಮೆಂಟ್ಸ್‍ನ ಸೂಪರ್ ವೈಸರ್ ಮಂಜುನಾಥ್ ಆಕೆಯ ಮೇಲೆ (ಲಕ್ಷ್ಮಮ್ಮ) ಮಂಗಳವಾರ ಸಂಜೆ ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಯಗೊಂಡ ಲಕ್ಷ್ಮಮ್ಮ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಜುನಾಥ್ ತಮ್ಮ ಮೇಲೆ ಗಾಜಿನ ಫ್ಯಾಟ್ರಾನ್‍ನಿಂದ ಹಲ್ಲೆ ನಡೆಸಿದರು. ಹೀಗಾಗಿ ಕುತ್ತಿಗೆ ಮತ್ತು ಎದೆ ಭಾಗಕ್ಕೆ ಗಾಯಗಳಾಗಿದೆ ಎಂದು ಗಾಯಾಳು ಲಕ್ಷ್ಮಮ್ಮ ಆಪಾದಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕರ ಪ್ರತಿಭಟನೆ: ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಸಹೋ ದ್ಯೋಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ರುವುದನ್ನು ಖಂಡಿಸಿ ಗಾರ್ಮೆಂಟ್ಸ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೂರಾರು ಕಾರ್ಮಿಕರು ಗಾರ್ಮೆಂಟ್ಸ್ ಮುಂಭಾಗ ಬುಧ ವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಕೆಲಸ ನಿರ್ವಹಿಸಲು ಎಂದಿನಂತೆ ಆಗಮಿಸಿದ ನೂರಾರು ಮಹಿಳೆಯರು ತಮ್ಮ ಸಹೋದ್ಯೋಗಿ ಮೇಲೆ ಸೂಪರ್‍ವೈಸರ್ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಬೇಕು ಎಂದು ತೀರ್ಮಾನಿಸಿದರು.

ಅದರಂತೆ ಗಾರ್ಮೆಂಟ್ಸ್‍ನ ಮುಂಭಾಗ ಕುಳಿತು ಸೂಪರ್‍ವೈಸರ್ ಮಂಜುನಾಥ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ಹಲ್ಲೆ ನಡೆಸಿರುವ ಮಂಜುನಾಥ್‍ನನ್ನು ಕೆಲಸದಿಂದ ವಜಾಗೊಳಿಸಬೇಕು. ಗಾರ್ಮೆಂಟ್ಸ್ ನಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸ ಬೇಕು ಎಂದು ಒತ್ತಾಯಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಫೌಜಿಯಾ ತರನ್ನುಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ತಹಶೀಲ್ದಾರ್ ಪುರಂದರ, ರಾಮ ಸಮುದ್ರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಭೇಟಿ ನೀಡಿ ಪ್ರತಿಭಟನಾ ನಿರತ ಕಾರ್ಮಿಕರ ಅಹ ವಾಲು ಆಲಿಸಿದರು. ತಪ್ಪೆಸಗಿ ರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊ ಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ನೂರಾರು ಮಹಿಳೆ ಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Translate »