ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ
ಮೈಸೂರು

ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ

August 26, 2021

ಮೈಸೂರು,ಆ.25(ಆರ್‍ಕೆ)-ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಸಂಬಂಧ ಬುಧವಾರ ಸಂಜೆ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸೋಮವಾರ ಸಂಜೆಯಷ್ಟೇ ಹಾಡ ಹಗಲೇ ಜುವೆಲರಿ ಅಂಗಡಿ ದೋಚಿ, ಅಮಾ ಯಕನ ಗುಂಡಿಕ್ಕಿ ಹತ್ಯೆಗೈದ ಘಟನೆ ಇಡೀ ಮೈಸೂರು ನಗರವನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯಿಂದ ಮುಖ್ಯಮಂತ್ರಿ, ಗೃಹ ಸಚಿವರು ಅಸಮಾಧಾನಗೊಂಡಿದ್ದಾರೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಸದಾ ಜನದಟ್ಟಣೆ ಸ್ಥಳದಲ್ಲೇ ರಾಜಾ ರೋಷವಾಗಿ ಕೃತ್ಯವೆಸಗಿ ಪರಾರಿಯಾಗಿ ರುವ ನಾಲ್ವರ ಸುಳಿವೇ ಸಿಕ್ಕಿಲ್ಲ. ಇದೀಗ ವಿದ್ಯಾರ್ಥಿನಿ ಮೇಲೆ 6 ಮಂದಿ ಸಾಮೂ ಹಿಕ ಅತ್ಯಾಚಾರ ನಡೆಸಿರುವುದು ನಮ್ಮಲ್ಲಿ ಕಾನೂನು-ಸುವ್ಯವಸ್ಥೆ ಹೇಗಿದೆ ಎಂಬು ದನ್ನು ತೋರಿಸುತ್ತದೆ ಎಂದ ಸಚಿವರು, ಮೈಸೂರು ಪೊಲೀಸರ ಕರ್ತವ್ಯದ ಬಗ್ಗೆ ತಮ್ಮ ಅತೃಪ್ತಿ ವ್ಯಕ್ತಪಡಿಸಿದರು.

ಅಪರಾಧ ಕೃತ್ಯದ ಆರೋಪಿಗಳು ಎಲ್ಲೇ ಅಡಗಿದ್ದರೂ ಪತ್ತೆ ಮಾಡಿ ಎಳೆದು ತರಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸ ದಂತೆ ಎಚ್ಚರ ವಹಿಸಬೇಕು. ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಗಸ್ತು ತೀವ್ರ ಗೊಳಿಸಿ, ಭಾತ್ಮೀದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುತ್ತಮುತ್ತಲೂ ಏನಾಗು ತ್ತಿದೆ ಎಂಬುದನ್ನು ತಿಳಿದುಕೊಂಡು ಮೈಯೆಲ್ಲಾ ಕಣ್ಣಾಗಿ ಕೆಲಸ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀ ಸರಿಗೆ ತಾಕೀತು ಮಾಡಿದರು.

ಸಭೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತ ಡಾ. ಚಂದ್ರ ಗುಪ್ತ, ನಿನ್ನೆ ರಾತ್ರಿ ನಿರ್ಜನ ಪ್ರದೇಶಕ್ಕೆ ತೆರ ಳಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದ್ದು, ಸಹಪಾಠಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದರು. ಸಂಸದ ಪ್ರತಾಪ್ ಸಿಂಹ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎಸ್.ಎ. ರಾಮದಾಸ್, ಐಜಿಪಿ ಪ್ರದೀಪ್, ಮಧುಕರ್ ಪವಾರ್, ಎಸ್ಪಿ ಆರ್.ಚೇತನ್, ಡಿಸಿಪಿಗಳಾದ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Translate »