ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು
ಮಂಡ್ಯ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

July 13, 2021

ಮಂಡ್ಯ, ಜು.12- ಗಣಿಗಾರಿಕೆ ನಡೆಸುವ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ಕೊಡುವುದೇ ಇಲ್ಲ. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಕಲ್ಲು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿಯೇ ಇಲ್ಲ. ಕೆಲ ಅಧಿಕಾರಿಗಳ ಶಾಮೀಲಾತಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಡ್ಯಾಂ ಸುತ್ತ ಗಣಿಗಾರಿಕೆ ಇದೆ. ಅಲ್ಲಿ ಬ್ಲಾಸ್ಟ್ ಮಾಡಿದಾಗ ಸುತ್ತಲ ಪ್ರದೇ ಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿ ಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೆ ಎದ್ದು ಹೊಲ ಮೇಯ್ದ ರೀತಿ ಯಂತಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಡಾ.ನಾರಾಯಣಗೌಡ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು.

ಅವರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಲು ಗಣಿಗಾರಿಕೆ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೇಳೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇನ್ನು ಮುಂದೆ ಕಡ್ಡಾಯವಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಬೇಕು. ಸರಿಯಾಗಿ ರಾಜಧನ ಸಂಗ್ರಹ ಮಾಡಬೇಕು ಎಂದು ಸಚಿವರು ಸೂಚಿಸಿದರು.

ನಮ್ಮ ಜಿಲ್ಲೆಯಲ್ಲಿ 95ಕ್ಕೂ ಹೆಚ್ಚು ಕಲ್ಲು ಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಅಧಿಕಾರಿಗಳು ತಕ್ಷಣ ಎಲ್ಲ ಲೊಪ ದೋಷ ಸರಿಪಡಿಸಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

ಕನ್ನಂಬಾಡಿ ಅಣೆಕಟ್ಟಿನ ವಿಚಾರ ಸದ್ಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಣಿ ಪ್ರದೇಶದಲ್ಲಿ ಬ್ಲಾಸ್ಟ್ ಮಾಡುವುದರಿಂದ ಡ್ಯಾಂಗೆ ಡ್ಯಾಮೇಜ್ ಆಗುತ್ತೆ ಎಂಬ ಕೂಗು ಬಹಳ ದಿನಗಳಿಂದ ಇದೆ. ಹೀಗಾಗಿ ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನೇ ಸ್ಥಗಿತ ಮಾಡುವುದು ಉತ್ತಮ. ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳೋಣ. ಅಲ್ಲದೆ ಬೇಬಿ ಬೆಟ್ಟದಲ್ಲಿ ಪ್ರವಾಸೋಧ್ಯಮಕ್ಕೆ ಅನು ಕೂಲವಾಗುವಂತೆ ಯೋಜನೆ ರೂಪಿಸಿ ಎಂದು ಸಚಿವರು ಹೇಳಿದರು.

ಅಕ್ರಮ ತಡೆಗೆ ಸಹಾಯವಾಣಿ ಆರಂಭ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯ ಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜೊತೆಗೆ ಜನಸಾಮಾ ನ್ಯರ ನೆರವನ್ನೂ ಪಡೆಯಬೇಕು. ಜಿಲ್ಲೆ ಯಲ್ಲಿ ಎಲ್ಲೇ ಅಕ್ರಮವಾಗಿ ಗಣಿಗಾರಿಕೆ ನಡೆದರೆ, ಬ್ಲಾಸ್ಟ್ ಮಾಡಿದರೆ ತಕ್ಷಣ ಆ ಪ್ರದೇಶದ ಜನಸಾಮಾನ್ಯರಿಗೆ ತಿಳಿಯುತ್ತದೆ. ಸಹಾಯ ವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ. ಆದ್ದ ರಿಂದ ಸಹಾಯವಾಣಿ ಕೇಂದ್ರ ತೆರೆದು ಜನಸಾಮಾನ್ಯರಿಗೆ ಆ ಬಗ್ಗೆ ಮಾಹಿತಿ ನೀಡ ಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಟಾಸ್ಕ್‍ಫೋರ್ಸ್ ರಚನೆಯಾಗ ಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೆÇಲಿಸ್ ಇಲಾಖೆ, ಆರ್‍ಟಿಓ, ಕಂದಾಯ, ಪಂಚಾಯತರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಫೋರ್ಸ್ ರಚನೆಯಾಗಬೇಕು. ತಕ್ಷಣವೆ ಸರ್ವೆ ನಡೆಸಿ, ವರದಿ ನೀಡಬೇಕು. ಎಲ್ಲ ಕಡೆ ತಪಾಸಣಾ ಕೇಂದ್ರ ಮಾಡಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಗಳ ಪಟ್ಟಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾ ಗುವುದು. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಕೋಟಿ ಕೋಟಿ ರೂಪಾಯಿ ಆದಾಯ ನಷ್ಟವಾಗುತ್ತಿದೆ. ತಪಾಸಣಾ ಕೇಂದ್ರ ದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಆಗಬೇಕು. ಕಲ್ಲು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾ ಇಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್. ಅಶ್ವಥಿ, ಜಿಲ್ಲಾ ಪೆÇಲಿಸ್ ವರಿಷ್ಠಾಧಿಕಾರಿ ಅಶ್ವಿನಿ, ಸಿಇಒ ದಿವ್ಯ ಪ್ರಭು, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿ ಪದ್ಮಜಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Translate »