ಬೆಂಗಳೂರು, ಮಾ.8- ಬೆಂಗಳೂರಿನಲ್ಲಿ ಸ್ಫೋಟ ಸಂಭವಿಸಿದೆ. ನಗರದ ಆಡು ಗೋಡಿಯ ಬಳಿ ಈ ಘಟನೆ ಸಂಭವಿ ಸಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ. ಕಸದ ರಾಶಿಯ ನಡುವೆ ಈ ಸ್ಫೋಟ ಸಂಭವಿಸಿರುವುದು ಅಚ್ಚರಿ, ಆತಂಕ ಮೂಡಿಸಿದೆ. ಗಾಯಾಳು ವನ್ನು 50 ವರ್ಷದ ನರಸಿಂಹಯ್ಯ ಎಂದು ಗುರುತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಗ್ರಾನೈಟ್ ಕತ್ತರಿಸುವ ಕೆಮಿಕಲ್ ಎಸೆದಿದ್ದು ಕೆಮಿಕಲ್ ರಿಯಾಕ್ಷನ್‍ನ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೂ ತನಿಖೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಲ್ಲಿ ಮತ್ತೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜ್ಯಕ್ಕೆ 3 ಪ್ರಯೋಗಾಲಯ: ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಮೈಸೂರು, ಹಾಸನ ಹಾಗೂ ಶಿವಮೊಗ್ಗ ಸೇರಿದಂತೆ ರಾಜ್ಯದ 3 ಕಡೆ ವೈರಲ್ ರಿಸರ್ಚ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿಸ್(ವಿಆರ್‍ಡಿಎಲ್) ತೆರೆಯಲು ಸ್ಥಳಗಳನ್ನು ಗುರುತಿಸಿದೆ. ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಸದ್ಯವೇ ಪ್ರಯೋಗಾಲಯ ಕಾರ್ಯಾರಂಭಗೊಳ್ಳಲಿವೆ. ಜತೆಗೆ ಬಳ್ಳಾರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಸೋಂಕು ಮಾದರಿ ಸಂಗ್ರಹ ಕೇಂದ್ರಗಳನ್ನಾಗಿ ಐಸಿಎಂಆರ್ ಗುರುತಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.