ಮಹಾಪುರುಷರ ತತ್ವ ಪಾಲನೆ ಅವಶ್ಯ: ಶ್ವೇತಾ ದೇವರಾಜ್
ಹಾಸನ

ಮಹಾಪುರುಷರ ತತ್ವ ಪಾಲನೆ ಅವಶ್ಯ: ಶ್ವೇತಾ ದೇವರಾಜ್

January 22, 2020

ಹಾಸನ, ಜ.21-ಮಹಾಪುರುಷರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ಬಿ.ಎಸ್.ಶ್ವೇತಾ ದೇವರಾಜ್ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿಂದು ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ವಚನ ಸಾಹಿತ್ಯಗಳ ಮೂಲಕ ಜಾತಿ ಪದ್ಧತಿಯ ವಿರುದ್ಧ ಹೋರಾಡಿದರು. ಅವರ ಹಾದಿಯನ್ನು ಅನುಸರಿಸಿ ನಾವೆಲ್ಲರೂ ಉತ್ತಮ ಸಮಾಜವನ್ನು ನಿರ್ಮಿಸಲು ಮುಂದಾಗಬೇಕು ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಅಂಬಿಗರ ಚೌಡಯ್ಯ ಸಮಾಜದಲ್ಲಿದ್ದ ಮೂಢನಂಬಿಕೆಗಳು, ಕಂದಾಚಾರಗಳ ವಿರುದ್ಧ ತಮ್ಮ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಅವರು ನೀಡಿದ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ನಿಂಗೇಗೌಡ ಮಾತನಾಡಿದರು. ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಯೋಗೇಶ್ ಉಪನ್ಯಾಸ ನೀಡಿದರು.

ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಮ್, ಉಪವಿಭಾಗಾಧಿಕಾರಿ ಡಾ.ನವೀನ್‍ಭಟ್, ಸ್ವಾತಂತ್ರ್ಯ ಹೋರಾಟಗಾg ಹೆಚ್.ಎಂ.ಶಿವಣ್ಣ, ತಹಸಿಲ್ದಾರರಾದ ಶಿವಶಂಕರಪ್ಪ, ಜಿಪಂ ಉಪ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ.ಜಗದೀಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಲಿಂಗಪ್ಪ ಎಸ್.ಕುಂಬಾರ್ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

Translate »