ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ
ಮೈಸೂರು

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ

December 9, 2020

ಬೆಂಗಳೂರು,ಡಿ.8(ಕೆಎಂಶಿ)-ಕೃಷಿಕನ ಆದಾಯ ಹೆಚ್ಚಿಸಲು ನೂತನ ಕಾಯ್ದೆ ಗಳು ನೆರವಾಗಲಿವೆ ಎಂದು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿಮ್ಮನ್ನು ಬಳಸಿ ರಾಜಕೀಯ ಮಾಡಲು ಹೊರಟಿರುವವರಿಗೆ ಬೆಲೆ ಕೊಡಬೇಡಿ ಎಂದು ರೈತರಿಗೆ ಕಿವಿಮಾತು ಹೇಳಿ ದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೆಲವರ ಚಿತಾವಣೆಯಿಂದ ಭಾರತ್ ಬಂದ್‍ಗೆ ಕರೆ ನೀಡಿದ್ದರೂ ಇದಕ್ಕೆ ಜನ ಸ್ಪಂದನೆ ದೊರೆತಿಲ್ಲ. ರೈತರ ಬದುಕನ್ನು ಹಸನು ಗೊಳಿಸಲು ತಂದಿರುವ ಕಾನೂನಿಗೆ ಜನತೆಯ ಬೆಂಬಲ ಇದೆ ಎಂಬುದು ಇದರಿಂದಲೇ ಅರಿ ವಾಗುತ್ತದೆ ಎಂದರು. ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಮಸೂದೆಗಳನ್ನು ಜಾರಿಗೆ ತಂದಿದ್ದಾರೆ. ಕೃಷಿ ಉತ್ಪನ್ನ ಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರೆಯ ಲಿದೆ. ಜತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ಕಾಯ್ದೆ ನೆರವಾಗಲಿದೆ ಎಂದರು.

ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು.

ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಅನ್ನದಾತನಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ನಮ್ಮ ಪಕ್ಷ ಜಾಗೃತಿ ಮೂಡಿಸಲಿದೆ ಎಂದರು. ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮುಳುಗುವ ಹಡಗು. ಅವರು ಕಪ್ಪು ಪಟ್ಟಿ ಇಲ್ಲವೇ ಬಿಳಿ ಪಟ್ಟಿ ಧರಿಸಿದರೂ ಏನೂ ಪ್ರಯೋಜನ ವಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಈ ಮಧ್ಯೆ ರೈತರ ಹೋರಾಟಕ್ಕೆ ಸಂಬಂಧಿಸಿ ದಂತೆ ಪ್ರತ್ಯೇಕ ಟ್ವೀಟ್ ಮಾಡಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತ ದೇಶದ ಬೆನ್ನೆಲುಬು. ಆತ ಇದ್ದರೇನೆ ರಾಷ್ಟ್ರ. ಅವನ ಕಷ್ಟಕ್ಕೆ ನಾವು ಯಾವಾಗಲೂ ಜೊತೆಯಲ್ಲಿ ಇರುತ್ತೇವೆ. ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ.

Translate »