ನಾಳೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಹೆಚ್.ವಿಶ್ವನಾಥರಿಗೆ ಸನ್ಮಾನ
ಮೈಸೂರು

ನಾಳೆ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಅಡಗೂರು ಹೆಚ್.ವಿಶ್ವನಾಥರಿಗೆ ಸನ್ಮಾನ

August 18, 2018

ಹಳೆ ಚಿತ್ರಗೀತೆಗಳ ಸ್ವರ ಸಂಗಮ ಸಂಗೀತ
ಮೈಸೂರು:  ಮೈಸೂರಿನ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಆ.19ರಂದು ಸಂಜೆ 5ಕ್ಕೆ ಹಳೇಬೇರು ಹೊಸಚಿಗುರು ಗಾಯಕರ ಗೆಳೆಯರ ಬಳಗದಿಂದ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹಾಗೂ ಶಾಸಕ ಅಡಗೂರು ಹೆಚ್.ವಿಶ್ವನಾಥ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಹಳೆಯ ಚಿತ್ರಗೀತೆಗಳ ಸ್ವರ ಸಂಗಮ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ಪ್ರಧಾನ ಕಾರ್ಯದರ್ಶಿ ರೇವಣ್ಣ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗನ್ಮೋಹನ ಅರಮನೆಯಲ್ಲಿ ಆ.19ರಂದು ಸಂಜೆ 5ಕ್ಕೆ ಕಾರ್ಯಕ್ರಮವನ್ನು ನಿವೃತ್ತ ಲೋಕಾಯುಕ್ತ ಎನ್.ಸಂತೋಷ ಹೆಗ್ಡೆ ಉದ್ಘಾಟಿಸಲಿ ದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿ.ಶ್ರೀನಿವಾಸ ಪ್ರಸಾದ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಅಂಕಣಕಾರ ಡಾ.ರಮೇಶ್ ಗುಬ್ಬಿಗೂಡು ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳ ಲಿದ್ದಾರೆ. ಇದೇ ವೇಳೆ ಶಾಸಕ ಎ.ಹೆಚ್.ವಿಶ್ವನಾಥ್ ಅವರನ್ನು ಆತ್ಮೀಯವಾಗಿ ವೇದಿಕೆಯ ವತಿಯಿಂದ ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮದ ಬಳಿಕ ಕನ್ನಡ ಹಾಗೂ ಹಿಂದಿ ಹಳೆಯ ಚಿತ್ರ ಗೀತೆಯನ್ನು ಬಳಗದ ಗಾಯಕರು ಹಾಡಲಿದ್ದಾರೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಹಳೇಬೇರು ಹೊಸಚಿಗುರು ಗಾಯಕರ ಗೆಳೆಯರ ಬಳಗದ ಅಧ್ಯಕ್ಷ ಡಾ.ಶ್ರೀನಿವಾಸಮೂರ್ತಿ, ಗಾಯಕ ಪ್ರದೀಪ್, ಮಹದೇವ ಇದ್ದರು

Translate »