ಜಿಲ್ಲೆಯಲ್ಲಿ 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ
ಚಾಮರಾಜನಗರ

ಜಿಲ್ಲೆಯಲ್ಲಿ 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ

April 26, 2018

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ್ದ 53 ಅಭ್ಯರ್ಥಿಗಳ ಪೈಕಿ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತ ಗೊಂಡಿದ್ದು, ಉಳಿದ 49 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿವೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಹೆಚ್.ಎಂ.ಮಾದೇಶ್ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ. ಉಳಿದಂತೆ 15 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಬಿ.ನಿಂಗರಾಜು ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತ ಗೊಂಡಿದೆ. ಉಳಿದಂತೆ 8 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಎನ್.ಡಿ.ಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಂ.ಮನಸ್ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ. ಉಳಿದಂತೆ 9 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದೆ.ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟು 17 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈ ಎಲ್ಲರ ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದ್ದಾರೆ.

Translate »