ಆರೋಗ್ಯ ಕವಚದಡಿ ಆಂಬುಲೆನ್ಸ್ ಸಂಖ್ಯೆ 750ಕ್ಕೆ ಹೆಚ್ಚಳ
News

ಆರೋಗ್ಯ ಕವಚದಡಿ ಆಂಬುಲೆನ್ಸ್ ಸಂಖ್ಯೆ 750ಕ್ಕೆ ಹೆಚ್ಚಳ

February 20, 2022

ಬೆಂಗಳೂರು, ಫೆ.19 (ಕೆಎಂಶಿ)-ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ-108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿ ಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನು ಗುಣವಾಗಿ ಆಂಬುಲೆನ್ಸ್ ಸೇವೆಯನ್ನು ಉನ್ನತೀ ಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಆಂಬುಲೆನ್ಸ್ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಧುನಿಕ ತಂತ್ರ ಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಆಂಬುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಹಲವು ಸಂದರ್ಭಗಳಲ್ಲಿ ರೋಗಿಯ ಜೀವ ಉಳಿಸಲು ‘ಗೋಲ್ಡನ್ ಅವರ್’ ತುಂಬಾ ಮಹತ್ವದ್ದಾಗಿರುತ್ತದೆ. ಈ ಅವಧಿಯಲ್ಲಿ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಅವರ ಜೀವ ಉಳಿಯು ತ್ತದೆ. ಇಂತಹ ಸೇವೆಯನ್ನು ಸಕಾಲಕ್ಕೆ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಆಂಬು ಲೆನ್ಸ್ ಸೇವೆಯಲ್ಲಿ ಆಮೂಲಾಗ್ರ ಬದಲಾ ವಣೆಗೆ ಸರ್ಕಾರ ಮುನ್ನುಡಿ ಬರೆದಿದೆ. ಸರ್ಕಾರ ಆರೋಗ್ಯ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಆರೋಗ್ಯ ವಲಯವನ್ನು ಎಲ್ಲಾ ಆಯಾಮಗಳಿಂದ ಅಭಿ ವೃದ್ಧಿ ಪಡಿಸುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಗೆ ಹೆಚ್ಚು ಆದ್ಯತೆ ನೀಡಿದ್ದು, ಈಗಾಗಲೇ ತಜ್ಞರ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಆ ಬಳಿಕ ಹೊಸ ತಂತ್ರಜ್ಞಾನದ ಬಳಕೆ ಮತ್ತು ಆಂಬುಲೆನ್ಸ್ ಆಧುನಿಕರಣಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗ ಸೂಚಿ ಪ್ರಕಾರ, ಒಂದು ಲಕ್ಷ ಜನಸಂಖ್ಯೆಗೆ ಒಂದು ಬೇಸಿಕ್ ಲೈಫ್ ಸಪೆÇೀರ್ಟ್ (ಬಿ.ಎಲ್.ಎಸ್.) ಆಂಬುಲೆನ್ಸ್ ಮತ್ತು ಪ್ರತಿ 5 ಲಕ್ಷ ಜನಸಂಖ್ಯೆಗೆ ಒಂದು ಅಡ್ವಾನ್ಸ್ಡ್ ಲೈಫ್ ಸಪೆÇೀರ್ಟ್ (ಎಎಲ್‍ಎಸ್) ಆಂಬುಲೆನ್ಸ್ ಇರಬೇಕು. ಒಂದು ಆಂಬುಲೆನ್ಸ್ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳನ್ನು ನಿರ್ವಹಣೆ ಮಾಡಿದರೆ ಮತ್ತು 120 ಕಿ.ಮೀ.ಗಿಂತ ಹೆಚ್ಚು ದೂರ ಕ್ರಮಿಸಿದರೆ, ಅಂತಹ ಕಡೆ ಮತ್ತೊಂದು ಆಂಬುಲೆನ್ಸ್ ಒದಗಿಸಬೇಕಾಗುತ್ತದೆ.
ಈ ಮಾರ್ಗಸೂಚಿಯನ್ನು ಯಥಾವತ್ತಾಗಿ ಅನು ಷ್ಠಾನಕ್ಕೆ ತರುವ ಮಹತ್ವಾಕಾಂಕ್ಷೆ ಸರ್ಕಾರಕ್ಕಿದೆ. ಹೀಗಾಗಿ ಆಂಬುಲೆನ್ಸ್ ಸಂಖ್ಯೆಯನ್ನು ಪ್ರಸ್ತುತದ 710 ರಿಂದ 750ಕ್ಕೆ ಹೆಚ್ಚಿಸಲು ತೀರ್ಮಾನಿಸ ಲಾಗಿದೆ. ಈ ಪೈಕಿ, 40% ಎ.ಎಲ್.ಎಸ್ ಮತ್ತು 60% ಬಿ.ಎಲ್.ಎಸ್.ಆಗಿರಲಿವೆ. ಸರ್ಕಾರ ಹೊಸದಾಗಿ 380 ಆಂಬುಲೆನ್ಸ್‍ಗಳನ್ನು ಖರೀದಿ ಮಾಡಲಿದೆ. ಈ ಪೈಕಿ, 340 ಆಂಬುಲೆನ್ಸ್‍ಗಳು ಹಳೆಯ ಆಂಬುಲೆನ್ಸ್‍ಗಳ ಬದಲಿಯಾಗಿ ಬರಲಿವೆ. ಉಳಿದ 40 ಹೊಸ ಆಂಬುಲೆನ್ಸ್‍ಗಳಾಗಿ ರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಆಂಬುಲೆನ್ಸ್ ಸೇವೆಯಲ್ಲಿ ಕರೆ ಕೇಂದ್ರ ಅಥವಾ ಕಮಾಂಡ್ ಸೆಂಟರ್ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಹಾಗೂ ಆಂಬುಲೆನ್ಸ್ ಸಿಬ್ಬಂದಿ ನಡುವೆ ಸೇತುವೆಯಂತೆ ಕೆಲಸ ಮಾಡುವ ಈ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸ ಲಾಗಿದೆ. ಇದಕ್ಕಾಗಿ ಕಾಲ್ ಸೆಂಟರ್‍ನ ಸೀಟುಗಳ ಸಂಖ್ಯೆಯನ್ನು 54 ರಿಂದ 75ಕ್ಕೆ ಏರಿಸಲಾಗುತ್ತದೆ.

ಈ ಕಮಾಂಡ್ ಸೆಂಟರ್, ಆಂಬುಲೆನ್ಸ್‍ನ ಜಿಪಿಎಸ್ ಟ್ರ್ಯಾಕಿಂಗ್, ಸಿಬ್ಬಂದಿಯ ಬಯೋ ಮೆಟ್ರಿಕ್ ಹಾಜರಾತಿ, ಆಂಬುಲೆನ್ಸ್ ಸೇವೆಯ ಲೈವ್ ಸ್ಟ್ರೀಮಿಂಗ್, ಆನ್‍ಲೈನ್ ಮಾನವ ಸಂಪನ್ಮೂಲ ನಿರ್ವಹಣೆ, ರೋಗಿಗಳ ಆರೈಕೆಯ ಎಲೆಕ್ಟ್ರಾನಿಕ್ ದಾಖಲೆಗಳ ನಿರ್ವಹಣೆ, ಅಹವಾಲು ಸ್ವೀಕಾರ ಮೊದಲಾದ ಹೊಸ ಸೌಲಭ್ಯ ಹೊಂದಲಿದೆ.

ಹಿಂದೆ ಆಂಬುಲೆನ್ಸ್ ನಿರ್ವಹಣೆ ಮಾಡುವ ಏಜೆನ್ಸಿಯನ್ನು ದರದ ಆಧಾರದಲ್ಲಿ ಮಾತ್ರ ಪರಿ ಗಣಿಸಲಾಗುತ್ತಿತ್ತು. ಈಗ ದರ ಹಾಗೂ ಗುಣ ಮಟ್ಟದ ಕಾರ್ಯನಿರ್ವಹಣೆಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿದೆ. ಯಾವುದೇ ಸರ್ಕಾರಕ್ಕೆ 6 ವರ್ಷಗಳ ಕಾಲ 100 ಸೀಟುಗಳ ಕಾಲ್ ಸೆಂಟರ್ ಸೇವೆ ಒದಗಿಸಿರುವುದು, ಯಾವುದೇ ಸರ್ಕಾರಕ್ಕೆ 500 ಆಂಬುಲೆನ್ಸ್‍ಗಳ ಸೇವೆ ನೀಡಿ ರುವುದು ಸೇರಿದಂತೆ ಹಲವು ನಿಗದಿತ ಷರತ್ತು ಗಳನ್ನು ಹೊಸ ಟೆಂಡರ್‍ನಲ್ಲಿ ವಿಧಿಸಲಾಗುತ್ತಿದೆ.

ಅಲ್ಲದೆ, ಸೇವೆ ನೀಡುವ ಏಜೆನ್ಸಿಯವರು, ತಂತ್ರ ಜ್ಞಾನವನ್ನು ಬಳಸಿ ಆಸ್ಪತ್ರೆಗಳನ್ನು ಮ್ಯಾಪ್ ಮಾಡಿರ ಬೇಕು. ಆಂಬುಲೆನ್ಸ್ ಸೇವೆ ನೀಡುವಾಗ ಅತಿ ಸಮೀಪದ ಆಸ್ಪತ್ರೆಯು ಸ್ವಯಂಚಾಲಿತವಾಗಿ ಆಯ್ಕೆಯಾಗುವಂತಹ ವ್ಯವಸ್ಥೆಯನ್ನು ಹೊಂದಿರ ಬೇಕು ಎಂಬ ಷರತ್ತು ವಿಧಿಸಲಾಗುತ್ತದೆ. ಇದರಿಂದ ಸೇವೆಯ ಗುಣಮಟ್ಟದಲ್ಲಿ ಯಾವುದೇ ಕೊರತೆ ಯಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Translate »