ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಮೈಸೂರು

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

June 12, 2019

ಮೈಸೂರು: ವಿಷ ಸೇವಿಸಿ ವ್ಯಕ್ತಿಯೊರ್ವ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಣಸೂರು ಟೌನ್ ನಿವಾಸಿ ವಿಶ್ವನಾಥ(50) ಎಂಬುವವರೇ ಆತ್ಮಹತ್ಯೆ ಮಾಡಿ ಕೊಂಡವರಾಗಿದ್ದು, ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್. ಠಾಣೆ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರಕ್ಕೆ ಸಾಗಿಸಿ ಸಂಬಂಧಿಕರಿಗೆ ಮಾಹಿತಿ ನೀಡಿ ಕರೆಸಿಕೊಂಡು ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಿದರು.

ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ವಿವಾದದಿಂದ ಬೇಸತ್ತು ವಿಶ್ವನಾಥ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Translate »