ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ
ಹಾಸನ

ವಿಮಾನ ನಿಲ್ದಾಣಕ್ಕಾಗಿ ರೈತರು ನೀಡುವ ಭೂಮಿಗೆ ದರ ನಿಗದಿಪಡಿಸುವ ಅಧಿಕಾರ ಹೆಚ್.ಡಿ.ರೇವಣ್ಣಗೆ

November 16, 2018

ಹಾಸನ: ನಗರದ ಹೊರವಲಯದ ಬೂವನಹಳ್ಳಿಯಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ 136 ಎಕರೆ ಜಮೀನನ್ನು ರೈತರಿಂದ ಪಡೆಯುವ ವಿಷಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ಅಧ್ಯಕ್ಷತೆಯಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕರಾದ ಬಿ.ವಿ.ಕರೀಗೌಡ, ಪಟೇಲ್ ಶಿವರಾಂ ಹಾಗೂ ವಿವಿಧ ರೈತ ಮುಖಂಡರು ಮತ್ತು ಭೂಮಾಲೀಕರ ಉಪಸ್ಥಿಯಲ್ಲಿ ಸಭೆ ನಡೆಯಿತು.

ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ, ಹಾಸನ ಜಿಲ್ಲೆಯ ಸಾರ್ವಜನಿಕರು ಹಾಗೂ ರೈತರ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಿಂದೆ ಹಾಸನ ದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕ್ರಮ ವಹಿಸಿದ್ದರು. ಈಗಾಗಲೇ 536 ಎಕರೆ ಭೂ ಸ್ವಾಧೀನವಾಗಿದ್ದು, ಬಳಕೆಗೆ ಲಭ್ಯವಿದೆ. ಉಳಿಕೆ ಜಮೀನನ್ನು ಭೂಸ್ವಾಧೀನಪಡಿಸಿ ಕೊಳ್ಳಬಹುದಾಗಿದೆ. ಆದರೆ ಸ್ಥಳೀಯ ರೈತರ ಹಿತ ಕಾಯುವ ದೃಷ್ಟಿಯಿಂದ ಸಾಧ್ಯ ವಿರುವ ಗರಿಷ್ಟ ಭೂ ಪರಿಹಾರ ಒದಗಿಸುವ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದೆ. ಅದಕ್ಕೆ ಎಲ್ಲರ ಒಪ್ಪಿಗೆ ಇದ್ದರೆ ಮಾತ್ರ ತಾವು ಸರ್ಕಾರದ ಮಟ್ಟದಲ್ಲಿ ಮಾತು ಕತೆ ನಡೆಸುವುದಾಗಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಟೇಲ್ ಶಿವರಾಂ, ಬಿ.ವಿ ಕರೀಗೌಡ, ಸ್ವಾಮಿಗೌಡ ಜಿಲ್ಲಾ ಉಸ್ತುವರಿ ಸಚಿವರು ಕೈಗೊಳ್ಳುವ ತೀರ್ಮಾನಕ್ಕೆ ತಾವೆಲ್ಲರೂ ಬದ್ಧರಿರುವುದಾಗಿ ಹೇಳಿದರು. ಸಚಿವರು ನಿಗದಿಪಡಿ ಸುವ ದರಕ್ಕೆ ಸಾಮೂಹಿಕವಾಗಿ ಒಪ್ಪಿಗೆ ನೀಡಲು ಎಲ್ಲರೂ ಸಿದ್ಧರಿದ್ದು, ತಮ್ಮ ಪರವಾಗಿ ಭೂ ಪರಿಹಾರ ನಿಗದಿಗೆ ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ರೈತರು ಜವಾಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿರುವುದಾಗಿ ತಿಳಿಸಿದರು.

ಸಚಿವರಾದ ರೇವಣ್ಣ ಅವರು ಮಾತ ನಾಡಿ ಜಿಲ್ಲೆಯ ಹಿತದೃಷ್ಟಿಯಿಂದ ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಹೆಚ್.ಡಿ ಕುಮಾರ ಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದು, ಕೇಂದ್ರ ಮಟ್ಟದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಶ್ರಮಿಸುತ್ತಿರುವು ದರಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾ ಗುತ್ತಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಉದ್ದೇಶಿತ ವಿಮಾನ ನಿಲ್ದಾಣದಲ್ಲಿ ಕೃಷಿ ಉತ್ಪನ್ನಗಳ ಸಾಗಾಟ ಹಾಗೂ ವಿಮಾನ ದುರಸ್ತಿ ಮತ್ತು ಸರ್ವೀಸ್ ಕೇಂದ್ರ ಹಾಗೂ ಯುವ ಸಮುದಾಯದ ತರಬೇತಿ ಕೇಂದ್ರ ಪ್ರಾರಂಭಿಸುವ ಯೋಜನೆಗೆ ಹೊಂದಲಾಗಿದೆ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಮಾತನಾಡಿ ಈಗಾಗಲೇ 536 ಎಕರೆ ಜಮೀನು ಸರ್ಕಾರದ ವಶದಲ್ಲಿದೆ. ಅಷ್ಟರಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಮಾಡಬಹುದಾಗಿದೆಯಾದರೂ ಸುಸಜ್ಜಿತವಾಗಿ ಮಾಡಿದರೆ ಸ್ಥಳೀಯರಿಗೆ ಅನುಕೂಲವೆಂಬ ಅಭಿಪ್ರಾಯದಿಂದ ಉಳಿದ 136 ಎಕರೆ ಯನ್ನು ನಿಯಮಾನುಸಾರ ಪಡೆಯಲು ಕ್ರಮವಹಿಸಲಾಗುತ್ತಿದೆ. ಎಲ್ಲಾ ಭೂಮಾಲೀಕರು ಒಮ್ಮತದ ತೀರ್ಮಾನ ಕೈಗೊಂಡರೆ ಸುಲಭವಾಗಿ ಹಾಗೂ ಶೀಘ್ರವಾಗಿ ಪ್ರಕ್ರಿಯೆ ಪೂರ್ಣವಾಗಲಿದೆ ಎಂದು ಹೇಳಿದರು.

ವಿಮಾನ ನಿಲ್ದಾಣ ಸ್ಥಾಪನೆಗೆ ಭೂಮಿ ಬಿಟ್ಟು ಕುಡುವ ಕುರಿತಂತೆ ನ.15 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಅಧಿ ಕಾರಿಗಳ ಹಾಗೂ ಎಡಿಸಿಯವರ ಉಪಸ್ಥಿತಿ ಯಲ್ಲಿ ರೈತರೊಂದಿಗೆ ಮತ್ತೊಂದು ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ಇನ್ನೊಂದು ಉನ್ನತ ಮಟ್ಟದ ಸಭೆ ನಡೆಯಲಿದೆ.

Translate »