ಗುಣಮಟ್ಟದ ಶಿಕ್ಷಣ ನೀಡುವುದೇ ಮೊರಾರ್ಜಿ ಶಾಲೆಯ ಆದ್ಯತೆ
ಕೊಡಗು

ಗುಣಮಟ್ಟದ ಶಿಕ್ಷಣ ನೀಡುವುದೇ ಮೊರಾರ್ಜಿ ಶಾಲೆಯ ಆದ್ಯತೆ

January 6, 2020

ಕುಶಾಲನಗರ, ಜ.5- ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದೇ ಮೊರಾರ್ಜಿ ದೇಸಾಯಿ ಶಾಲೆಯ ಮೊದಲ ಆದ್ಯತೆ ಯಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಹೇಳಿದರು.

ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಲ್ಲಿರುವ ಮೊರಾರ್ಜಿ ದೇಸಾಯಿ ಸರ್ಕಾರಿ ವಸತಿ ಶಾಲೆ ಹಾಗೂ ವಿಜ್ಞಾನ ಪಿಯು ಕಾಲೇಜಿನಲ್ಲಿ ಶನಿವಾರ ಸಂಜೆ ಏರ್ಪಡಿ ಸಿದ್ದ ಶಾಲಾ ವಾರ್ಷಿಕೋತ್ಸವ ಮತ್ತು ಸಂಚಿಕೆ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಮೊದಲು ಕಲಿಸಬೇಕಾಗಿರು ವುದು ಬೌದ್ಧಿಕವಿಕಸನಕ್ಕೆ ಪೂರಕವಾದ ಶಿಕ್ಷಣವಾಗಿದೆ. ರಾಜ್ಯದಲ್ಲಿ ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆ ದಾಖಲೆಗಳ ಮೇಲೆ ದಾಖಲೆ ಮಾಡುತ್ತಾ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಈ ಸಂಸ್ಥೆಯ ಪ್ರಾಂಶು ಪಾಲ ಚಂದ್ರಶೇಖರ ರೆಡ್ಡಿ ಅವರು ಉತ್ತಮ ಪ್ರಾಂಶುಪಾಲರಾಗಿ ರಾಜ್ಯದ ಪ್ರಶಸ್ತಿ ಪಡೆ ದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಕೃತಿ ಶಾಲಾ ಸಂಚಿಕೆ ಬಿಡುಗಡೆ ಮಾಡಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, 1994ರಲ್ಲಿ ಶಾಸಕರಾಗಿ ಪ್ರಥಮ ಬಾರಿ ಆಯ್ಕೆಯಾದ ಸಂದರ್ಭ ಜೆ.ಹೆಚ್.ಪಟೇಲ್ ಮುಖ್ಯಮಂತ್ರಿ ಆಗಿದ್ದರು. ಈ ವೇಳೆ 19 ಮೊರಾರ್ಜಿ ಶಾಲೆಗಳನ್ನು ತೆರೆಯುವುದಾಗಿ ಘೋಷಣೆ ಮಾಡಿದಾಗ ಎಂ.ಸಿ.ನಾಣಯ್ಯ ಅವರು ಸಚಿವರಾಗಿದ್ದರು. ಈ ಇಬ್ಬರ ಮೇಲೆ ಒತ್ತಡ ಹಾಕಿ ಕೊಡಗಿನ ಬಸವನಹಳ್ಳಿ ಯಲ್ಲಿ ಪ್ರಥಮ ಮೊರಾರ್ಜಿ ದೇಸಾಯಿ ಶಾಲೆ ಸ್ಥಾಪನೆ ಮಾಡಲಾಯಿತು ಎಂದರು.

ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವನಹಳ್ಳಿ ಮೊರಾರ್ಜಿ ಶಾಲೆ ಮಕ್ಕಳಿಗೆ ಶಿಸ್ತು, ಸಂಯಮ, ವಿನಮ್ರತೆ, ಗುಣಮಟ್ಟ ಶಿಕ್ಷಣವನ್ನು ನೀಡಿ ಅವರ ಭವಿಷ್ಯ ವನ್ನು ರೂಪಿಸುತ್ತಿದ್ದು, ಇತರೆ ಶಾಲೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ಮೈಸೂರು ಸಿಎಡಿಎ ಜಂಟಿ ನಿರ್ದೇಶಕ ತಿರುಮಲೇಶ್ ಮಾತನಾಡಿ, ಮಕ್ಕಳು ನಿರಂತರ ಅಧ್ಯಯನಶೀಲತೆ ಮೈಗೂಡಿಸಿ ಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳ ಸಮ ನ್ವಯಾಧಿಕಾರಿ ಲೋಕೇಶ್ ಕಳೆದ ಸಾಲಿ ನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಯಲ್ಲಿ ಅತಿಹೆಚ್ಚು ಅಂಕಗಳಿಸಿ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ದರು. ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶು ಪಾಲ ಚಂದ್ರಶೇಖರ್ ರೆಡ್ಡಿ ಅಧ್ಯಕ್ಷತೆ ವಹಿಸಿ ದ್ದರು. ಕಾರ್ಯಕ್ರಮದಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ, ಕೂಡಿಗೆ ಡಯಟ್ ಹಿರಿಯ ಉಪನ್ಯಾಸ ಕೆ.ವಿ.ಸುರೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪಿ.ಶೇಖರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನೂಷಾ ತಂಡದವರು ಪ್ರಾರ್ಥಿಸಿದರು. ಶಿಕ್ಷಕ ಕರಿಯಪ್ಪ ಶಾಲಾ ವರದಿ ವಾಚಿಸಿದರು. ಚಂದ್ರಶೇಖರ್ ರೆಡ್ಡಿ ಸ್ವಾಗತಿಸಿದರು. ಶಿಕ್ಷಕ ರಾದ ರಮೇಶ್, ಗಿರೀಶ್ ವಂದಿಸಿದರು.

ವರ್ಣರಂಜಿತ ಕಾರ್ಯಕ್ರಮ: ಶಾಲಾ ವಿದ್ಯಾರ್ಥಿಗಳು ಸುಮಾರು 5 ಗಂಟೆಗಳ ಕಾಲ ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃ ತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಪೆÇೀಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

 

 

Translate »