ಜನಸಂಖ್ಯೆ ಹೆಚ್ಚಳದಿಂದ ಸಮಸ್ಯೆ: ನಿಯಂತ್ರಣ ಅಗತ್ಯ
ಮಂಡ್ಯ

ಜನಸಂಖ್ಯೆ ಹೆಚ್ಚಳದಿಂದ ಸಮಸ್ಯೆ: ನಿಯಂತ್ರಣ ಅಗತ್ಯ

July 13, 2021

ಮಂಡ್ಯ, ಜು.12- ಜನಸಂಖ್ಯೆ ಹೆಚ್ಚಳದಿಂದ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಆದ್ದ ರಿಂದ ಜನಸಂಖ್ಯೆ ನಿಯಂತ್ರಣ ಅಗತ್ಯ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಧನಂಜಯ ಹೇಳಿದರು.

ಇಂದು ಡಿಎಚ್‍ಒ ಕಚೇರಿಯ ಮುಂಭಾಗ ದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ನಡೆದ ಜಾಥಾ ದಲ್ಲಿ ಮಾತ ನಾಡಿದ ಅವರು, ಜುಲೈ 12 ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಇಡೀ ಪ್ರಪಂಚದಾ ದ್ಯಂತ ಆಚರಿಸಲಾಗುತ್ತದೆ. ಭಾರತ ದೇಶ ವಿಶ್ವದಲ್ಲೆ ಅತಿ ಹೆಚ್ಚು ಜನಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಪ್ರತಿಯೊಬ್ಬರು ಜನಸಂಖ್ಯಾ ನಿಯಂತ್ರಣ ಮಾಡಿ ನಮ್ಮ ದೈನಂದಿನ ಜೀವನ ಮಟ್ಟ ಸುಧಾರಿಸಿಕೊಳ್ಳಬೇಕು ಎಂದರು.
ಭಾರತ ದೇಶದಲ್ಲಿ 130 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ಜನಸಂಖ್ಯೆ ಹೆಚ್ಚಾದಂತೆ ಸಮಸ್ಯೆಗಳಾಗಬಹುದು, ದೈನಂದಿನ ಜೀವನದ ಶೈಲಿ ಬದಲಾಗÀಬಹುದು. ಈಗಿರುವ ವ್ಯವಸ್ಥೆ ಮೇಲೆ ಒತ್ತಡ ಬೀರÀಬಹುದು, ಪ್ರಕೃತಿಯಲ್ಲಿ ಬದಲಾವಣೆಯಾಗಬಹುದು ಹೀಗೆ ಮಿತಿ ಮೀರಿದ ಜನ ಸಂಖ್ಯೆಯಿಂದ ಇಡೀ ವಿಶ್ವಕ್ಕೆ ಮತ್ತು ಭೂಮಿಗೆ ಮಾರಕವಾಗಿದೆ ಎಂದರು.

ಆದ್ದರಿಂದ ಪ್ರತಿ ವರ್ಷ ಜು.12ರ ವಿಶ್ವ ಜನ ಸಂಖ್ಯಾ ದಿನಾಚರಣೆಯ ಅಂಗವಾಗಿ ಮಂಡ್ಯ ನಗರದ ಜನಗಳಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ಹೆಚ್ಚಿನ ಮಕ್ಕಳನ್ನು ಮಾಡಿಕೊಳ್ಳುವುದರಿಂದ ಯಾವ ರೀತಿ ಅನಾನುಕೂಲಗಳಾ ಗುತ್ತವೆ ಎಂಬುದರ ಬಗ್ಗೆ ಅರಿವು ಮೂಡಿಸಿ ಮಹಿಳೆ ಮತ್ತು ಪುರುಷರಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ (ಓಊಗಿ) ಮಾಡಲಾಗುತ್ತಿದೆ ಎಂದರು.

ಪುರುಷರು ಕೂಡ ಸಂತಾನಹರಣ ಶಸ್ತ್ರಚಿಕಿತ್ಸೆ ಯನ್ನು ಮಾಡಿಸಿಕೊಳ್ಳಬಹುದು. ಈ ಚಿಕಿತ್ಸೆ ಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಇದರಿಂದ ಯಾವುದೇ ಅಡ್ಡ ಪರಿಣಾಮ ಗಳಾಗುವುದಿಲ್ಲ. ಮಹಿಳೆಯರಿಗೂ ಕೃತಕ ವಿಧಾನಗಳನ್ನು ಬಳಸಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಚಿಕಿತ್ಸೆಗೆ ಬೇಕಾದ ಲಸಿಕೆಗಳನ್ನು ಸರ್ಕಾರ ಉಚಿತವಾಗಿ ಕೊಡು ತ್ತಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಶಶಿಧರ್, ಆರ್‍ಸಿಹೆಚ್ ಅಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಕಣ್ಗಾ ವಲು ಅಧಿಕಾರಿ ಡಾ.ಅಶ್ವತ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಗಳು ಡಾ.ಭವಾಶಂಕರ್, ಡಾ.ಮರೀಗೌಡ, ಡಾ.ವೇಣುಗೋಪಾಲ್ ಇತರರು ಹಾಜರಿದ್ದರು.

Translate »