ರಾಸಲೀಲೆ ಪ್ರಕರಣ: ಸರ್ಕಾರದಲ್ಲಿ ಇಂಥವರೆಲ್ಲ ಇರಬೇಕು ಎಂದು ವ್ಯಂಗ್ಯವಾಡಿದ ಡಿ.ಕೆ.ಶಿ
ಮೈಸೂರು

ರಾಸಲೀಲೆ ಪ್ರಕರಣ: ಸರ್ಕಾರದಲ್ಲಿ ಇಂಥವರೆಲ್ಲ ಇರಬೇಕು ಎಂದು ವ್ಯಂಗ್ಯವಾಡಿದ ಡಿ.ಕೆ.ಶಿ

March 3, 2021

ಬೆಂಗಳೂರು,ಮಾ.2-ಸರ್ಕಾರದ ಪ್ರಭಾವಿ ಸಚಿವರೊಬ್ಬರ ರಾಸಲೀಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದೆ. ಬಿಜೆಪಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕೆಲ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ವಿಪಕ್ಷಗಳಿಗೆ ಇದು ಪ್ರಬಲ ಅಸ್ತ್ರವಾಗಿದ್ದು, ಸರ್ಕಾರದ ವಿರುದ್ಧ ಹರಿ ಹಾಯಲು ಸಿದ್ದತೆ ನಡೆಸಿದ್ದಾರೆ. ಇದೇ ಹಿನ್ನಲೆ ನಾಳೆ ಕಾಂಗ್ರೆಸ್ ನಾಯಕ ಬ್ರಿಜೇಶ್ ಕಾಳಪ್ಪ ನೇತೃತ್ವ ದಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಟಿ ನಡೆಸಲಿದೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರ ರಾಸಲೀಲೆ ಪ್ರಕರಣದ ಕುರಿತು ನನಗೆ ಸಂಪೂರ್ಣ ಮಾಹಿತಿ ಇಲ್ಲ. ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಆಡಳಿತ ಪಕ್ಷ ಏನು ಹೇಳುತ್ತದೆ ನೋಡೋಣ ಎಂದಿದ್ದಾರೆ. ಇದೇ ವೇಳೆ ಈ ಸರ್ಕಾರದಲ್ಲಿ ಇಂಥವರೆಲ್ಲ ಇರಬೇಕು. ನಾವೇಕೆ ರಾಜೀನಾಮೆ ಕೇಳೋಣ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಕರಣದ ಕುರಿತು ಬಿಜೆಪಿಯವರು ಏನು ಹೇಳುತ್ತಾರೆ. ಯಾವ ಕ್ರಮ ಕೈಗೊಳ್ಳುತ್ತಾರೆ ನೋಡೊಣ. ಅವರು ಮಾತನಾಡದಿದ್ದರೆ ವಿಪಕ್ಷವಾಗಿ ನಾವುಗಳು ಮಾತನಾಡುತ್ತೇವೆ ಎಂದಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವರು ನೈತಿಕ ಹೊಣೆ ಹೊತ್ತು, ಕೂಡಲೇ ರಾಜೀನಾಮೆ ನೀಡ ಬೇಕು ಎಂದು ಆಗ್ರಹಿಸಿದೆ. ಪ್ರಕರಣ ಬೆಳಕಿಗೆ ಬರುತ್ತಿ ದ್ದಂತೆ ಈ ಕುರಿತು ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ನಿರಾಕರಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಬಿ.ವೈ.ವಿಜಯೇಂದ್ರ, ಘಟನೆ ಬಗ್ಗೆ ಗಮನಕ್ಕೆ ಬಂದಿಲ್ಲ. ಮಾಹಿತಿ ಪಡೆದು ಕೊಂಡು ಮಾತನಾಡು ತ್ತೇನೆ ಎಂದಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ನೋಡೋಣ ಎಲ್ಲ ಮಾಹಿತಿ ಬರಲಿ. ಇನ್ನು ಸಚಿವರು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆ ಹೆಣ್ಣು ಮಗಳು ಏನೂ ಹೇಳಿಲ್ಲ. ಎಲ್ಲಾ ಸತ್ಯಾಸತ್ಯತೆ ಹೊರ ಬರಲಿ. ಆ ನಂತರ ನಾನು ಪ್ರತಿಕ್ರಿಯೆ ನೀಡುವೆ. ನೈತಿಕ ಹೊಣೆ ಹೊರಬೇಕು ನಿಜ. ಆದರೆ ಅವರು ಮಾತನಾಡದೆ ನಾನು ಪ್ರತಿಕ್ರಿಯೆ ಕೊಡು ವುದಿಲ್ಲ ಎಂದಿದ್ದಾರೆ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಬಗ್ಗೆ ಕ್ರಮ ತೆಗೆದು ಕೊಳ್ಳಬೇಕು. ಕರ್ನಾಟಕ ಭವನ ವನ್ನು ಈ ಹೀನ ಕೃತ್ಯಕ್ಕೆ ಬಳಸಿದ್ದು ಖಂಡನೀಯ ಎಂದರು.

Translate »