ವ್ಯಕ್ತಿತ್ವ ವಿಕಾಸಗೊಳಿಸುವುದೇ ನಿಜವಾದ ವಿದ್ಯೆ
ಮೈಸೂರು

ವ್ಯಕ್ತಿತ್ವ ವಿಕಾಸಗೊಳಿಸುವುದೇ ನಿಜವಾದ ವಿದ್ಯೆ

November 4, 2019

ಮೈಸೂರು,ನ.೩(ವೈಡಿಎಸ್)-ಯಾವುದು ಮನುಷ್ಯನ ವ್ಯಕ್ತಿತ್ವವನ್ನು ವಿಕಾಸ ಮಾಡುತ್ತದೋ ಅದೇ ನಿಜವಾದ ವಿದ್ಯೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಮೈಸೂರು ವಿವಿ ಸಮಾಜಕಾರ್ಯ ಅಧ್ಯಯನ ವಿಭಾಗವು ಪ್ರೊ.ವೈ.ಎಸ್.ಸಿದ್ದೇಗೌಡ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿಚಾರ ಸಂಕಿರಣದ ಸಮಾರೋಪದಲ್ಲಿ ಮಾತನಾಡಿದ ಅವರು, ಯಾವ ದೇಶದಲ್ಲಿ ಶಿಕ್ಷಣ ಹಾಗೂ ಶಿಕ್ಷಕರು ಆಂತರಿಕವಾಗಿ ಅತ್ಯುನ್ನತ ಜ್ಞಾನ ಹೊಂದಿರುತ್ತಾರೋ ಆ ದೇಶ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರೊ.ವೈ.ಎಸ್.ಸಿದ್ದೇಗೌಡ ಅವರ ಕುರಿತು ಅಭಿಮಾನಿಗಳು ಮತ್ತು ಸಹೋದ್ಯೋಗಿಗಳು ಬರೆದ ಲೇಖನಗಳನ್ನು ಒಳಗೊಂಡ `ಸವ್ಯಸಾಚಿ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ನಂತರ ಪ್ರೊ.ವೈ.ಎಸ್.ಸಿದ್ದೇಗೌಡ ಹಾಗೂ ಪತ್ನಿ ಆಶಾ ಅವರನ್ನು ಸನ್ಮಾನಿಸಲಾಯಿತು. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಹೊಸದಿಲ್ಲಿ ಭಾರತೀಯ ಶಿಕ್ಷಣ ಮಂಡಳಿಯ ರಾಷ್ಟಿçÃಯ ಕಾರ್ಯದರ್ಶಿ ಮುಕುಲ್ ಕಾನಿತ್ಕರ್, ಸಮಾಜಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷ ಚಂದ್ರಮೌಳಿ ಉಪಸ್ಥಿತರಿದ್ದರು.

Translate »