ಬೆಂಗಳೂರು, ಜು. 15(ಕೆಎಂಶಿ)- ಬಹುಮತವಿಲ್ಲದ ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮೇಲ್ಮನೆ ಯಲ್ಲಿ ಧರಣಿ ನಡೆಸಿದರೆ, ಆಡಳಿತ ಪಕ್ಷದ ಸದಸ್ಯರು ರಾಜ್ಯ ಸರ್ಕಾರ ವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ದೂರಿದ ಘಟನೆಯೂ ನಡೆಯಿತು. ಅಧಿವೇಶನ ಆರಂಭಗೊಳ್ಳುತ್ತಿ ದ್ದಂತೆ ಪ್ರತಿಪಕ್ಷದ ಸದಸ್ಯರು ಬಹುಮತವಿಲ್ಲದವರು ಹೇಗೆ ಸರ್ಕಾರ ನಡೆಸುತ್ತಾರೆ ಎಂದು ಏರುಧ್ವನಿಯಲ್ಲಿ ಆಡಳಿತ ಪಕ್ಷದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ಹರಿಹಾಯ್ದು, ಘೋಷಣೆಗಳನ್ನು ಕೂಗಲಾರಂಭಿಸಿದರು. ಸದನದಲ್ಲಿ ಯಾರು ಏನು ಮಾತನಾಡುತ್ತಿ ದ್ದಾರೆ ಎಂಬುದೇ ತಿಳಿಯಲಿಲ್ಲ. ಇದರ ನಡುವೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಕೆಳ ಮನೆಯಲ್ಲಿ ಆಡಳಿತ ಪಕ್ಷದ 16 ಸದಸ್ಯರು ರಾಜೀನಾಮೆ ನೀಡಿದ್ದಾರೆ. ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಇದಲ್ಲದೆ, ಎಲ್ಲಾ ಸಚಿವರೂ ರಾಜೀನಾಮೆ ನೀಡಿ ದ್ದಾರೆ. ಪ್ರಶ್ನೋತ್ತರ ಕಲಾಪ ನಡೆಸುವ ನೈತಿಕತೆ ಇಲ್ಲ. ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಭಾನಾಯಕಿ ಜಯಮಾಲಾ, ಸಚಿವ ರಾದ ಸಾ.ರಾ.ಮಹೇಶ್, ಪುಟ್ಟರಂಗಶೆಟ್ಟಿ, ಬಂಡೆಪ್ಪ ಕಾಶೆಂಪುರ್, ನಾವು ರಾಜೀನಾಮೆ ನಿಮಗೆ ನೀಡಿz್ದÉೀವೆಯೇ? ನಮ್ಮ ರಾಜೀ ನಾಮೆ ಅಂಗೀಕಾರವಾಗಿದೆಯೇ? ನಿಮಗೆ ನೈತಿಕತೆ ಇದೆಯೇ? ನಮ್ಮ ಶಾಸಕರನ್ನು ಕೊಂಡೊಯ್ದು ಮುಂಬೈನಲ್ಲಿಟ್ಟುಕೊಂಡಿದ್ದೀರಾ ಎಂದು ತಿರುಗೇಟು ನೀಡಿದರು. ಈ ಸಂದರ್ಭದಲ್ಲಿ ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿ ನಡೆಯಿತು. ಸಭಾಪತಿ ಸ್ಥಾನದಲ್ಲಿ ಉಪಸಭಾಪತಿಯವರು ಪ್ರಶ್ನೋತ್ತರಕ್ಕೆ ಅವಕಾಶ ಮಾಡಿಕೊಟ್ಟಿz್ದÉೀನೆ ಎಂದು ಶರಣಪ್ಪ ಮಟ್ಟೂರು ಅವರಿಗೆ ಪ್ರಶ್ನೆಯನ್ನು ಕೇಳಲು ಸೂಚಿಸಿದರು. ಆಗ ಆಕ್ರೋಶಗೊಂಡ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಭಿತ್ತಿಪತ್ರಗಳನ್ನು ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾ ದರು. ಅಲ್ಪ ಮತಕ್ಕೆ ಕುಸಿದಿರುವ ಸರ್ಕಾರ ರಾಜೀನಾಮೆ ನೀಡಬೇಕು. ಬಹುಮತ ಕಳೆದುಕೊಂಡಿರುವ ಸರ್ಕಾರ ಅಧಿಕಾರದಿಂದ ತೊಲಗಬೇಕು ಎಂದು ಘೋಷಣೆಗಳನ್ನು ಕೂಗಲಾರಂಭಿಸಿದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು. ಶಾಸಕರ ಖರೀದಿ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಐವಾನ್ ಡಿಸೋಜಾ, ಟಿ.ಎ.ಶರವಣ ಮುಂತಾ ದವರು 100 ಕೋಟಿ, 50 ಕೋಟಿಗೆ ಶಾಸಕರನ್ನು ಖರೀದಿ ಮಾಡ ಲಾಗಿದೆ ಎಂದು ಭಿತ್ತಿ ಫಲಕಗಳನ್ನು ಹಿಡಿದು, ಘೋಷಣೆ ಗಳನ್ನು ಕೂಗಲಾರಂಭಿಸಿದರು. ಸದನದಲ್ಲಿ ಗದ್ದಲ, ಕೋಲಾಹಲದ ವಾತಾ ವರಣ ಉಂಟಾಯಿತು. ಮಧ್ಯಪ್ರವೇಶಿಸಿದ ಉಪ ಸಭಾ ಪತಿ ಧರ್ಮೇಗೌಡ, ಕಲಾಪವನ್ನು ನಾಳೆ 11.30ಕ್ಕೆ ಮುಂದೂಡಿದರು.