ರಸ್ತೆ ಬದಿ ವ್ಯಾಪಾರಿಗಳ ಸಂಘದ ಕಚೇರಿ ಉದ್ಘಾಟನೆ
ಮಂಡ್ಯ

ರಸ್ತೆ ಬದಿ ವ್ಯಾಪಾರಿಗಳ ಸಂಘದ ಕಚೇರಿ ಉದ್ಘಾಟನೆ

June 20, 2018

ಭಾರತೀನಗರ:  ಇಲ್ಲಿನ ರಸ್ತೆ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯನ್ನು ಎಸ್‍ಐ ಅಯ್ಯನಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಿಮ್ಮ ಕ್ಷೇಮಾಭಿವೃದ್ಧಿಗೆ ಸ್ವಂತ ನಿವೇಶನ ಪಡೆ ದಾಗ ಮಾತ್ರ ಇತರೆ ಸಮಸ್ಯೆಗಳಿಂದ ಪಾರಾ ಗಲು ಸಾಧ್ಯ. ಇಲ್ಲದಿದ್ದರೆ ಪ್ರತಿ ದಿನ ಕಿರಿಕಿರಿ ಅನುಭವಿಸಬೇಕಾಗುತ್ತದೆ ಎಂದರು.

ರಸ್ತೆ ಬದಿ ವ್ಯಾಪಾರ ಮಾಡುವ ವೇಳೆ ಅಪಘಾತಗಳು ಸಂಭವಿಸುತ್ತವೆ. ಜೊತೆಗೆ ಗ್ರಾಪಂ, ಪೊಲೀಸ್ ಇಲಾಖೆಗಳಿಂದ ಅನುಮತಿ ಸಿಗದೇ ಅಕ್ರಮವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಬೇಕಾ ಗುತ್ತದೆ. ಇದರಿಂದ ಹಲವು ಸಮಸ್ಯೆಗಳು ಉಂಟಾಗುತ್ತವೆ. ಕೂಡಲೇ ಸ್ವಂತ ನಿವೇಶನ ಪಡೆಯಲು ಮುಂದಾಗ ಬೇಕೆಂದು ಸಲಹೆ ನೀಡಿದರು.

ನಿಮ್ಮ ಸಂಘ ಒಗ್ಗಟ್ಟಿನಿಂದ ಇದ್ದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಹಾಗಾಗಿ ಎಲ್ಲರೂ ಒಟ್ಟಾಗಿ ಸಂಘ ಮುನ್ನಡೆಸಿಕೊಂಡು ಹೋದಲ್ಲಿ ಸ್ವಂತ ನಿವೇಶನ, ಕಟ್ಟಡಗಳನ್ನು ನಿರ್ಮಿಸಿಕೊಳ್ಳಬಹುದು ಎಂದರು.

ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವು ದರಿಂದ ಸಾರ್ವಜನಿಕರಿಗೆ ಪಾದಾಚಾರಿ ಗಳಿಗೆ ಮತ್ತು ವಾಹನ ಸವಾರರಿಗೆ ಸಂಚ ರಿಸಲು ತೊಂದರೆ ಉಂಟಾಗುತ್ತದೆ. ಇದನ್ನು ಮನದಲ್ಲಿಟ್ಟುಕೊಂಡು ಇತರರಿಗೆ ತೊಂದರೆಯಾಗದಂತೆ ವ್ಯಾಪಾರ ನಡೆಸ ಬೇಕೆಂದು ಹೇಳಿದರು.

ರಸ್ತೆ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, 20 ವರ್ಷಗಳಿಂದ ರಸ್ತೆ ಬದಿಯಲ್ಲೇ ವ್ಯಾಪಾರ ನಡೆಸುತ್ತಿದ್ದೇವೆ. ಇದರಿಂದ ಹಲವರಿಗೆ ತೊಂದರೆ ಉಂಟಾ ಗುತ್ತಿದೆ. ಸಂಬಂಧಿಸಿದ ಗ್ರಾಪಂ, ಸಚಿವರು ಮತ್ತು ಪೊಲೀಸ್ ಇಲಾಖೆ ನಮಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಿ ಕೊಟ್ಟು ಬಡವರಿಗೆ ಒಂದು ನೆಲೆ ಕಾಣುವಂತೆ ಮಾಡಿಕೊಡ ಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ ದೇವಮ್ಮ, ಉಪಾಧ್ಯಕ್ಷ ದೊರೆ, ರೈತ ಸಂಘದ ಮುಖಂಡ ಮಹೇಂದ್ರ, ಪುಟ್ಟಸ್ವಾಮಿ, ಸಂಘದ ಉಪಾಧ್ಯಕ್ಷ ಜಿ.ಬಿ. ನಾಗರಾಜು, ಕಾರ್ಯದರ್ಶಿ ಎನ್. ಸುಬ್ಬಯ್ಯ, ಖಜಾಂಚಿ ಲೋಕೇಶ್ ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Translate »