ಡೆಂಗ್ಯೂ ನಿಯಂತ್ರಣದಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ
ಚಾಮರಾಜನಗರ

ಡೆಂಗ್ಯೂ ನಿಯಂತ್ರಣದಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ

June 1, 2018

ಚಾಮರಾಜನಗರ:  ಮಳೆ ಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರವನ್ನು ಆರಂಭಿಕ ಹಂತದಲ್ಲಿಯೇ ತಡೆಗಟ್ಟಲು ಜನರ ಸಹಭಾಗಿತ್ವ ರೂಪಿಸು ವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾ ದದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂ ತ್ರಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾ ಗಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಡೆಂಗ್ಯೂ ಜ್ವರ ಈಡಿಸ್ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಹರಡುತ್ತದೆ. ಸ್ವಚ್ಚ ನೀರಿ ನಲ್ಲಿ ಸಂತಾನ ಅಭಿವೃದ್ಧಿ ಮಾಡುವ ಈ ಸೊಳ್ಳೆಗಳು ಹಗಲು ವೇಳೆಯಲ್ಲಿ ಮಾತ್ರ ವ್ಯಕ್ತಿಯನ್ನು ಕಚ್ಚಿ ರೋಗ ಹರಡುವಲ್ಲಿ ಕ್ರಿಯಾ ಶೀಲವಾಗುತ್ತದೆ. ಇದರ ಬಗ್ಗೆ ನಾಗರಿಕರು ಜಾಗೃತಿ ಹೊಂದಬೇಕಾಗಿದೆ ಎಂದರು.
ಡೆಂಗ್ಯೂ ಬಗ್ಗೆ ವಿವರಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಿದ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ್‍ಕುಮಾರ್ ಮಳೆ ಗಾಲದಲ್ಲಿ ಹೆಚ್ಚು ಕ್ರಿಯಾಶೀಲವಾಗುವ ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಹಳೆ ವಸ್ತುಗಳಾದ ಮಡಿಕೆ, ಡ್ರಮ್, ಬ್ಯಾರಲ್, ಉಪಯೋಗಿ ಸದ ಒರಳುಕಲ್ಲು ಹಾಗೂ ಹಳೆಯ ಟೈರುಗಳಲ್ಲಿ ಹೆಚ್ಚಾಗಿ ಕಾಣಸಿಗುತ್ತವೆ. ಇವು ಗಳ ನಿಯಂತ್ರಣಕ್ಕಾಗಿ ನಾಗರಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚತೆ ಯಿಂದ ಕಾಪಾಡಿಕೊಳ್ಳಲು ಕಾರ್ಯೋನ್ಮುಖ ರಾಗಬೇಕು ಎಂದರು.

ಡೆಂಗ್ಯೂ ನಿಯಂತ್ರಣಕ್ಕಾಗಿ ಜನರ ಸಹ ಭಾಗಿತ್ವದೊಂದಿಗೆ ವಿವಿಧ ಇಲಾಖೆಗಳು ಕೈಜೋಡಿಸಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾ ಭಿವೃದ್ಧಿ, ಶಿಕ್ಷಣ, ಸಮಾಜ ಕಲ್ಯಾಣ, ಮೀನು ಗಾರಿಕೆ, ಕೈಗಾರಿಕೆ, ನೀರಾವರಿ, ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆಗಳು ಸಹ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ಮಾಧ್ಯಮದವರಿಗೆ ಜಿಲ್ಲೆಯ ಯಾವುದೇ ಭಾಗದಿಂದ ಡೆಂಗ್ಯೂ ಶಂಕಿತ ಪ್ರಕರಣಗಳ ಬಗ್ಗೆ ಮಾಹಿತಿ ಬಂದಲ್ಲಿ ಸಂಬಂಧಪಟ್ಟ ಇಲಾ ಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಸ್ಪಷ್ಠೀಕರಣ ಅಥವಾ ಹೆಚ್ಚಿನ ಮಾಹಿತಿ ಯನ್ನು ಅಧಿಕೃತವಾಗಿ ಪಡೆದು ನಂತರ ವರದಿಯನ್ನು ಪ್ರಕಟಿಸುವಂತೆ ಮನವಿ ಮಾಡಿದರು. ಇದರಿಂದ ಸಾರ್ವಜನಿಕ ರಲ್ಲಿ ಮೂಡಬಹುದಾದ ಅತಂಕವನ್ನು ಸ್ವಲ್ಪಮಟ್ಟಿಗೆ ತಡೆಯಲು ಹಾಗೂ ನೈಜ ಚಿತ್ರಣ ನೀಡಲು ಅನುಕೂಲವಾಗುವುದು ಎಂದು ತಿಳಿಸಿದರು.

ಮನೆಮನೆಗೆ ಭೇಟಿ ನೀಡುವ ಆರೋಗ್ಯ ಇಲಾಖೆ ಸಿಬ್ಬಂದಿ ಡೆಂಗ್ಯೂ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ಸಮೀಕ್ಷೆ ಮಾಡಿ ಅದರ ನಿರ್ಮೂಲನೆಗೆ ಮಾಹಿತಿ ನೀಡು ವರು. ಜನರಿಗೆ ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿಯಂತ್ರಕ ಕಾಯಿಲ್‍ಗಳನ್ನು ಅಳ ವಡಿಸಿಕೊಳ್ಳುವ ಸ್ವಯಂ ರಕ್ಷಣಾ ವಿಧಾನ ಗಳನ್ನು ಅನುಸರಿಸಲು ಪ್ರೇರೇಪಿಸುವರು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತವಾಗಿ ವಿಲೇ ವಾರಿ ಮಾಡಲು ಅಗತ್ಯ ಮಾಹಿತಿ ಒದಗಿಸು ವರು ಎಂದ ಪ್ರಸಾದ್, ಡೆಂಗ್ಯೂ ನಿಯಂ ತ್ರಣಕ್ಕಾಗಿ ತೆರೆಯಲಾಗಿರುವ ಸಹಾಯ ವಾಣ ಸಂಖ್ಯೆ 104ಕ್ಕೆ ಕರೆ ಮಾಡಿ ಸಾರ್ವ ಜನಿಕರು ಮಾಹಿತಿ ಪಡೆದುಕೊಳ್ಳಬಹು ದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್‍ಸಿಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜು, ಜಿಲ್ಲಾ ವಾರ್ತಾಧಿಕಾರಿ ಪಲ್ಲವಿ ಹೊನ್ನಾಪುರ, ಮಾಧ್ಯಮ ಪ್ರತಿನಿಧಿಗಳು ಹಾಗೂ ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಡೆಂಗ್ಯೂ ಜ್ವರ ನಿಯಂ ತ್ರಣ ಕುರಿತು ಜಾಗೃತಿ ಮೂಡಿಸುವ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

Translate »