ಚಾಮರಾಜನಗರ,ಮಾ.9-ಸಧೃಢ ಸಮಾಜ ನಿರ್ಮಾಣ ಮಾಡುವಲ್ಲಿ ಮಹಿಳೆ ಯರ ಪಾತ್ರ ಅಪಾರ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಡಿ.ವಿ. ಪಾಟೀಲ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ನ್ಯಾಯಾಲಯದ ಆವ ರಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಪ್ರತಿಯೊಂದು ರಂಗ ದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು. ಮಹಿಳೆ ಭೂಮಿ ಯಂತೆ ತ್ಯಾಗಮಯಿ ಆಗಿದ್ದಾಳೆ. ಸಮಾಜ ದಲ್ಲಿ ಎಲ್ಲರೂ ಮಹಿಳೆಯರನ್ನು ಪೂಜ್ಯನೀಯ ಭಾವನೆಯಿಂದ ನೋಡಬೇಕು. ಹೆಣ್ಣು ಭಾರ ತೀಯ ಸಂಸ್ಕøತಿಯ ಪ್ರತಿಬಿಂಬ ಎಂದರು.
ಮಹಿಳೆಯರು ಪ್ರಸ್ತುತ ದಿನಗಳಲ್ಲಿ ಅಡುಗೆ ಮನೆಗೆ ಸೀಮಿತವಾಗದೆ ಎಲ್ಲಾ ರಂಗಗಳಲ್ಲಿಯೂ ತನ್ನ ಛಾಪು ಮೂಡಿ ಸುತ್ತಿದ್ದಾರೆ. ಪುರುಷರಷ್ಟೇ ಸಮಾನವಾಗಿ ಹೆಜ್ಜೆ ಇಡುತ್ತಿರುವ ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವವಾದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದರು.
ಮೈಸೂರಿನ ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸಿ.ತೇಜೋವತಿ ಮಾತನಾಡಿ, ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಸಾಧನೆ ಮಾಡಬೇಕು. ಸಮಾಜವು ಮಹಿಳೆ ಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮ ತ್ತೂರು ಇಂದುಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ವಿನಯ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ. ರಮೇಶ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಗಣಪತಿ ಜಿ.ಬಾದಾಮಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಮಹ ಮ್ಮದ್ ರೋಷನ್ ಷಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಸ್ಮಿತಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ಮಂಜು ಹರವೆ, ಸರ್ಕಾರಿ ಅಭಿಯೋಜಕಿ ಲೋಲಾಕ್ಷಿ, ಜಿಲ್ಲಾ ಸರ್ಕಾರಿ ವಕೀಲ ಹೆಚ್. ಎನ್.ಲೋಕೇಶ್, ವಿಶೇಷ ಸರ್ಕಾರಿ ಅಭಿ ಯೋಜಕ ಕೆ.ಯೋಗೇಶ್, ಜಿಲ್ಲಾ ನ್ಯಾಯಾಂಗ ನೌಕರರ ಸಂಘದ ಅಧ್ಯಕ್ಷರಾದ ವಿ.ಯಂಕ ನಾಯಕ ಕಾರ್ಯಕ್ರಮದಲ್ಲಿದ್ದರು.
ಎನ್‍ಡಬ್ಲೂಎಫ್‍ನಿಂದ ಮಹಿಳಾ ದಿನಾಚರಣೆ: ನಗರದ ಟಿಪ್ಪು ಮಸೀದಿ ಮುಂಭಾಗದಲ್ಲಿ ನ್ಯಾಷನಲ್ ವುಮೆನ್ಸ್ ಫ್ರಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನ್ಯಾಷನಲ್ ವುಮೆನ್ಸ್ ಫ್ರಂಟ್ ಜಿಲ್ಲಾಧ್ಯಕ್ಷೆ ನೂರ್‍ಅಸ್ಮಾ ಮಾತನಾಡಿ, ಮಹಿಳೆಯರು ಸಂಘಟಿತರಾಗುವ ಮೂಲಕ ತಮಗಿರುವ ಸಂವಿಧಾನ ಬದ್ದ ಹಕ್ಕು, ಕರ್ತವ್ಯಗಳನ್ನು ತಿಳಿದುಕೊಂಡು ಅದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲ ರಾಗ ಬೇಕಿದೆ ಎಂದರು. ಮಹಿಳೆಯರ ಅಭಿವೃದ್ಧಿ ಶಿಕ್ಷಣದಿಂದ ಸಾಧ್ಯ. ಆದ್ದರಿಂದ ಮಹಿಳೆ ಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ ಎಂದರು. ಇದೇ ವೇಳೆ ಸಲ್ಮಾ ಭಾನು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವುಮೆನ್ಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಸುಮೈಯಾ, ಆಸೀಫಾ, ರುಮಾನ, ಸುಮೇರಾ ಇತರರಿದ್ದರು.