ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಪಾತ್ರ ಅಮೂಲ್ಯ
ಹಾಸನ

ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಪಾತ್ರ ಅಮೂಲ್ಯ

March 18, 2019

ಜಿಲ್ಲಾ ಪಂಚಾಯಿತಿ ಸಿಇಓ ಡಾ.ಕೆ.ಎನ್.ವಿಜಯಪ್ರಕಾಶ್ ಅಭಿಪ್ರಾಯ
ಹಾಸನ: ಯುವ ಸಮು ದಾಯ ದೇಶದ ಆಸ್ತಿ ಹಾಗೂ ಅತ್ಯಂತ ಬಲಾಢ್ಯ ಶಕ್ತಿಯಾಗಿದ್ದು, ಇದು ಪ್ರಜಾ ಪ್ರಭುತ್ವ ವ್ಯವಸ್ಥ್ತೆಯಲ್ಲಿ ಸಕ್ರಿಯವಾಗಿ ತೊಡಗಬೇಕಿದೆ ಎಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಹೇಳಿದರು.

ನಗರದ ಕಲಾಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವೇಕಾ ಬ್ಯೂರೋಯಿಂದ ಆಯೋಜಿಸಲಾದ ಮತದಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾ ಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವ ಪೀಳಿಗೆಯ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

2019ರ ಲೋಕಸಭೆ ಚುನಾವಣೆ ಏಪ್ರಿಲ್ 18 ರಂದು ನಡೆಯಲಿದ್ದು, 18 ವರ್ಷ ತುಂಬಿದವರು ಕಡ್ಡಾಯವಾಗಿ ಸ್ವಯಂ ಪ್ರೇರಿತವಾಗಿ ಚುನಾವಣೆಯಲ್ಲಿ ಭಾಗವಹಿಸಬೇಕು. ನೂರಕ್ಕೆ ನೂರರಷ್ಟು ಮತದಾನ ಆಗುವ ಮೂಲಕ ಉತ್ತಮ ನಾಯಕನನ್ನು ಆರಿಸುವಂತೆ ಮನವಿ ಮಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡುವವರ ಸಂಖ್ಯೆ ಇನ್ನೂ ಹೆಚ್ಚು ಆಗಬೇಕು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರ ದಲ್ಲಿ ಪಾಲ್ಗೊಂಡು ಜ್ಞಾನ ವೃದ್ಧಿಸಿ ಕೊಂಡು ಮುಂದಿನ ಭವಿಷ್ಯ ರೂಪಿಸಿ ಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇಶದಲ್ಲಿ ಯುವಕರೇ ಹೆಚ್ಚಾಗಿದ್ದು ರಾಷ್ಟ್ರ ನಿರ್ಮಾಣದಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹಾಗಾಗಿ, ಎಲ್ಲರೂ ಆತ್ಮವಿಶ್ವಾಸದಿಂದ ದುಡಿಯುವ ಮೂಲಕ ವೈಯಕ್ತಿಕ, ಸಾಮಾಜಿಕ ಹಾಗೂ ಭಾರತದ ಅಭಿವೃದ್ಧಿಗೆ ಶ್ರಮಿಸ ಬೇಕು ಎಂದರು.
ವಿವೇಕಾ ಬ್ಯುರೋ ತರಬೇತಿದಾರ ಬಿ. ಶಿವಕುಮಾರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿ ಗಳಲ್ಲಿ ಮತ್ತೆ ಕೌಶಲ್ಯ ಎಚ್ಚರಗೊಳಿಸ ಬಹುದು. ಆದರೆ ಇಂಗ್ಲೀಷ್ ಭಾಷೆಯಲ್ಲಿ ಓದಿದವರಿಂದ ಇಂತಹ ಕೌಶಲ್ಯ ಜಾಗೃತಿ ಗೊಳಿಸಲು ಕಷ್ಟಕರ. ವಿದ್ಯಾರ್ಥಿಗಳು ಜೀವನದಲ್ಲಿ ಒಂದು ಗುರಿಯನ್ನು ಇಟ್ಟು ಕೊಂಡು ಅದನ್ನು ಮುಟ್ಟುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಇತ್ತೀಚೆಗೆ ದೇಶದ ಪ್ರತಿಷ್ಠಿತ ಖಾಸಗಿ ಸಂಸ್ಥೆಯೊಂದರ ಸಿಇಓ ಒಬ್ಬರು ಈ ವಿಷಯವಾಗಿ ಮಾತನಾಡುತ್ತಾ ಶೇ. 90ರಷ್ಟು ಇಂಜಿನಿಯರಿಂಗ್ ಗ್ರಾಜು ಯೇಟ್ಸ್ ಅನ್‍ಎಂಪ್ಲಾಯಬಲ್ ಎಂದಿ ದ್ದಾರೆ. ಇದನ್ನು ಅವಲೋಕಿಸಿದರೆ ತಾಂತ್ರಿಕ ಪದವೀಧರರ ಸ್ಥಿತಿಯೇ ಹೀಗಾದರೆ ಇನ್ನು ಬಿಎ, ಬಿ.ಕಾಂ, ಬಿಬಿಎ, ಬಿಬಿಎಂ ಮುಂತಾದ ಸಾಮಾನ್ಯ ಪದವೀಧರರ ಸ್ಥಿತಿ ಚಿಂತಾಜನಕ ಎಂಬುದರಲ್ಲಿ ಸಂಶಯವಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯ ಮತದಾನದ ಕುರಿತು ಪ್ರಮಾಣವಚನ ಬೋಧಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳಿಂದ ಇವಿಎಂ ಮತ್ತು ವಿ.ವಿ.ಪ್ಯಾಟ್‍ನ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಅರುಣ್‍ಕುಮಾರ್, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾ ಖೆಯ ಸಹಾಯಕ ನಿರ್ದೇಶಕ ಶಿವ ಲಿಂಗಪ್ಪ ಎನ್.ಕುಂಬಾರ, ಸ್ಪರ್ಧಾತ್ಮಕ ಪರೀಕ್ಷೆಗಳ ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವಕುಮಾರ್, ಮಲ್ನಾಡ್ ಇಂಜಿನಿಯ ರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ವಿಜಯ್‍ಕುಮಾರ್, ಪ್ರಸನ್ನ ಹಾಜರಿದ್ದರು.

ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಯಾವುದೇ ಆಮಿಷÀಗಳಿಗೆ ಒಳಗಾಗದೆ ಸ್ವ ಪ್ರೇರಣೆಯಿಂದ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಸಹಕರಿಸಬೇಕು
– ಡಾ.ಕೆ.ಎನ್.ವಿಜಯಪ್ರಕಾಶ್, ಜಿಪಂ ಸಿಇಓ

ವಿದ್ಯಾರ್ಥಿಗಳಿಂದ ಅಣಕು ಮತದಾನ
ಹಾಸನ: ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳ ಲಾಗಿದ್ದ ಮತದಾರರ ಜಾಗೃತಿ ಅಭಿ ಯಾನ ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾ ಹಿಸುವ ವಿವೇಕಾ ಬ್ಯುರೋರವರ ಉಚಿತ ಕಾರ್ಯಾಗಾರ ಕಾರ್ಯಕ್ರಮಕ್ಕೆ ಮೊದಲು ಏಪ್ರಿಲ್ 18 ರಂದು ನಡೆಯುವ ಲೋಕ ಸಭಾ ಚುನಾವಣೆಯಲ್ಲಿ ಮತ ಹಾಕುವ ಬಗ್ಗೆ ಮತ ಯಂತ್ರವನ್ನು ಪ್ರದರ್ಶಿಸಿ, ತಿಳಿಸಿ ವಿದ್ಯಾರ್ಥಿಗಳಿಂದ ಅಣಕು ಮತದಾನ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಪೌರಾಯುಕ್ತ ಪರಮೇಶ್ ರವರು, ಚುನಾ ವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬ. ಪತ್ರಿಯೊಬ್ಬ ಮತದಾರರೂ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇದನ್ನು ಯಶಸ್ವಿಗೊಳಿಸಬೇಕು.

ಚುನಾವಣೆಯಲ್ಲಿ ಪ್ರತಿಯೊಬ್ಬರ ಸಂಪೂರ್ಣ ಸಹಭಾಗಿತ್ವ ಸಂಪೂರ್ಣ ಅಗತ್ಯ ಎಂಬುದು ಚುನಾವಣಾ ಆಯೋಗದ ಆಶಯ. ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ಏ. 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಇರುವ 18 ವರ್ಷ ತುಂಬಿರು ವವರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಎಲ್ಲರೂ ನೈತಿಕ ಮತದಾನದ ಮಹತ್ವ ಅರಿಯಬೇಕು ಹಾಗೂ ಇತರರಿಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

Translate »