ಮೈಸೂರು: ಆರೋಗ್ಯ, ಶಿಕ್ಷಣ ಹಾಗೂ ಸಾಂಸ್ಕøತಿಕ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ರೋಟರಿ ಸಂಸ್ಥೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಸಾಧನೆಯ ಹೆಜ್ಜೆ ಗುರುತು ಮೂಡಿಸಿದೆ ಎಂದು ಹಿರಿಯ ರಂಗಕರ್ಮಿ ಪ್ರೊ.ಸಿ.ವಿ.ಶ್ರೀಧರಮೂರ್ತಿ ತಿಳಿಸಿದರು.
ಜೆಎಲ್‍ಬಿ ರಸ್ತೆಯ ಐಡಿಯಲ್ ಜಾವಾ ರೋಟರಿ ಸಭಾಂಗಣದಲ್ಲಿ ರೋಟರಿ ಮೈಸೂರು ಉತ್ತರ ವತಿಯಿಂದ ಆಯೋಜಿಸಿದ್ದ ‘ರೋಟರಿ ಮತ್ತು ಸಂಸ್ಕತಿ’ ವಿಷಯ ಕುರಿತು ಮಾತನಾಡಿದರು.
ರೋಟರಿ ಅಂತಾರಾಷ್ಟ್ರೀಯ ಮಟ್ಟದ ಸಾಮಾಜಿಕ ಸೇವಾ ಸಂಸ್ಥೆ, ಇಲ್ಲಿ ವಿವಿಧ ಕ್ಷೇತ್ರದಲ್ಲಿರುವ ಗಣ್ಯರು ಈ ಸಂಸ್ಥೆಯ ಸದಸ್ಯರಾಗಿದ್ದಾರೆ. ಜಗತ್ತಿನಾದ್ಯಂತ ಪೋಲಿಯೋ ತಡೆಗಟ್ಟುವಿಕೆ ಸೇರಿದಂತೆ ಹಳ್ಳಿಗಳಲ್ಲಿ ಉಚಿತ ಪ್ರಾಥಮಿಕ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಬಡವರಿಗೆ ಆರೋಗ್ಯ ಸೇವೆಯನ್ನು ನೀಡುತ್ತಿರುವುದು ರೋಟರಿ ಸಂಸ್ಥೆಯ ಸಾಮಾಜಿಕ ಬದ್ಧತೆಯನ್ನು ತೋರುತ್ತದೆ ಎಂದರು.
ರೋಟರಿ ಸದಸ್ಯರು ಪ್ರತಿವಾರ ಸಭೆ ಸೇರಿ ಒಂದೊಂದು ಜನಪರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾರೆ. ಇದರಿಂದ ಅನೇಕ ವಿವಿಧ ಕ್ಷೇತ್ರದ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಗೌರವ ಸಲ್ಲಿಸುತ್ತಿರುವುದು ಎಲ್ಲರೂ ಮೆಚ್ಚುವ ವಿಷಯ ಎಂದರು. ವೇದಿಕೆಯಲ್ಲಿ ರೋಟರಿ ಮೈಸೂರು ಉತ್ತರ ರೋ.ರಾಜಶೇಖರ ಕದಂಬ, ಸಹ ಕಾರ್ಯದರ್ಶಿ ಎ.ಪಿ.ವಿರೂಪಾಕ್ಷ ಉಪಸ್ಥಿತರಿದ್ದರು.