ರಷ್ಯಾ-ಉಕ್ರೇನ್ ಯುದ್ಧ
ಮೈಸೂರು

ರಷ್ಯಾ-ಉಕ್ರೇನ್ ಯುದ್ಧ

April 11, 2022

ನವದೆಹಲಿ, ಏ. ೧೦- ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವAತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಡನೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಭಾನುವಾರ ಮಾಹಿತಿ ನೀಡಿದೆ.

ಸಭೆ ವೇಳೆ ಉಭಯ ರಾಷ್ಟçಗಳ ನಡುವೆ ದ್ವಿಪಕ್ಷೀಯ ಸಹಕಾರ ಪರಿಶೀಲನೆ, ದಕ್ಷಿಣ ಏಷ್ಯಾದಲ್ಲಿನ ಇತ್ತೀಚಿನ ಬೆಳವಣ ಗೆಗಳು ಹಾಗೂ ಇಂಡೋ-ಪೆಸಿಫಿಕ್ ಮತ್ತು ಪರಸ್ಪರ ಆಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಲಿದ್ದಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಸಹಭಾಗಿತ್ವವನ್ನು ಮುಂದುವರಿಸಲು ಎರಡೂ ರಾಷ್ಟçಗಳಿಗೆ ಅನುವು ಮಾಡಿಕೊಡುತ್ತದೆ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ಉಭಯ ನಾಯಕರು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಇತ್ತೀಚಿನ ಬೆಳವಣ ಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಅಭಿಪ್ರಾಯ ಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ತಮ್ಮ ನಿಯಮಿತ ಮತ್ತು ಉನ್ನತ ಮಟ್ಟದ ಕಾರ್ಯತತ್ವವನ್ನು ಮುಂದುವರಿಸಲು ಎರಡೂ ಕಡೆಯವರಿಗೆ ಅನುವು ಮಾಡಿಕೊಡುತ್ತದೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

Translate »