ಪೌರ ಕಾರ್ಮಿಕರ ಸುರಕ್ಷತೆ ಕಡ್ಡಾಯ
ಮೈಸೂರು

ಪೌರ ಕಾರ್ಮಿಕರ ಸುರಕ್ಷತೆ ಕಡ್ಡಾಯ

February 22, 2019

ಮೈಸೂರು: ಜಿಲ್ಲೆ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸುರಕ್ಷತೆಗಾಗಿ ಹೆಲ್ಮೆಟ್, ಕೈ ಗಳಿಗೆ ಗ್ಲೌಸ್ ಮತ್ತು ಶೂ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಧಿಕಾರಿಗಳು ಮಾಡ ಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಎಲ್.ಮುರು ಗನ್ ಇಂದಿಲ್ಲಿ ತಾಕೀತು ಮಾಡಿದರು.

ಮೈಸೂರು ಜಿಲ್ಲಾ ಪಂಚಾಯತಿ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಗುರುವಾರ ಮೈಸೂರು ವಿಭಾಗ ಮಟ್ಟದ ಉನ್ನತಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಾತಿ ನಿಂದನೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆಯ ವ್ಯಯದಲ್ಲಿ ಬಿಡುಗಡೆಯಾಗಿರುವ ಪರಿ ಶಿಷ್ಟರ ಹಣ, ಮ್ಯಾನ್‍ಹೋಲ್ ಸ್ಕ್ಯಾವೆಂ ಜರ್ ಕಾಯ್ದೆ ಮತ್ತು ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಗತಿ ಕುರಿತು ಮೈಸೂರು ವಿಭಾಗದ 8 ಜಿಲ್ಲೆಗಳಿಂದ ಆಗಮಿಸಿ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿ ಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಹೊರ ಗುತ್ತಿಗೆ ಕಾರ್ಮಿಕರ ಇಎಸ್‍ಐ ಸಂಖ್ಯೆ, ಪಿಎಫ್ ಸಂಖ್ಯೆ, ಬ್ಯಾಂಕ್ ಖಾತೆ ಮತ್ತು ಸಂಬಳದ ಮಾಹಿತಿಯನ್ನು 15 ದಿನದೊಳಗೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ಕಟಿಂಗ್ ಶಾಪ್ ಮತ್ತು ದೇವಾಲಯ ಇನ್ನಿತರ ಸಾರ್ವ ಜನಿಕ ಸ್ಥಳಗಳಲ್ಲಿ ನಡೆಯುತ್ತಿರುವ ನಿಂದನೆಗಳನ್ನು ತಡೆಗಟ್ಟಲು ಅಧಿಕಾರಿಗಳ ತಂಡ ರಚಿಸಿ, ಅಂತಹ ಸ್ಥಳಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ಜಾತಿ ನಿಂದನೆ ಅಪರಾಧಗಳು ನಡೆಯುವ ಸ್ಥಳ ಗಳನ್ನು ಗುರ್ತಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆ ಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಕೆಲಸ ಮಾಡುತ್ತಿರುವ ಘಟನೆ ಗಳು ಕಂಡುಬಂದಿದ್ದು ಅಂತಹ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು, ಪೆÇಲೀಸ್ ವರಿಷ್ಠಾಧಿ ಕಾರಿ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಶಿಸ್ತುಕ್ರಮ ಕೈಗೊಂಡು ಮಕ್ಕಳನ್ನು ಶಾಲೆಗಳಿಗೆ ಸೇರಿಸುವಂತೆ ಸೂಚನೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿಗಳಿಗೆ ವಿಶೇಷವಾದ ಹಲ ವಾರು ಯೋಜನೆಗಳನ್ನು ಜಾರಿ ಮಾಡಿದ್ದು ಅರ್ಹ ಫಲಾನುಭವಿಗಳಿಗೆ ಯೋಜನೆಯ ಅನುಕೂಲಗಳು ದೊರಕುವಂತೆ ಅಧಿಕಾರಿ ಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಸಭೆಯಲ್ಲಿ ಮೈಸೂರು ನಗರ ಪೆÇಲೀಸ್ ಆಯುಕ್ತರಾದ ಕೆ.ವಿ.ಶರತ್ ಚಂದ್ರ ಹಾಗೂ ಮೈಸೂರು ವಿಭಾಗ ಮಟ್ಟದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳು, ಪೆÇಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಗಳು ಹಾಜರಿದ್ದರು.

Translate »