ಏ.15ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಮೈಸೂರು

ಏ.15ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

April 13, 2019

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏ.15ರಂದು ಸೋಮ ವಾರ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ವನ್ನು ಬಹಿರಂಗಪಡಿಸಲಾಗುವುದು, ಮಂಗಳವಾರ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಕೆಲ ಮಾಧ್ಯಮಗಳು ಏ.17ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿ ಮಾಡಿದ್ದವು. ಆದರೆ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು ಎಂದು ಶಿಖಾ ಹೇಳಿದ್ದಾರೆ.

ಮೌಲ್ಯಮಾಪನದ ಬಳಿಕ ಅಂಕಗಳನ್ನು ಆನ್ ಲೈನ್ ಮೂಲಕ ಸರ್ವರ್‍ಗೆ ಸೇರಿಸುವ ಕ್ರಮದಿಂದಾಗಿ ಈ ಬಾರಿ ಫಲಿತಾಂಶ ಬೇಗ ಪ್ರಕಟಿಸಲು ಸಾಧ್ಯವಾಗಲಿದೆ. ಸೋಮವಾರ ಅಧಿಕೃತವಾಗಿ ಫಲಿತಾಂಶ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.

Translate »