ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಪರಿಹಾರ
ಮೈಸೂರು

ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಪರಿಹಾರ

May 19, 2019

ಹುಬ್ಬಳ್ಳಿ: ಮೇ 23ರ ನಂತರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ, ಇಂತಹ ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯ ವಿಲ್ಲ. ಕಚ್ಚಾಡಿಕೊಂಡು ಸರ್ಕಾರ ನಡೆಸುವು ದಕ್ಕಿಂತ ವಿಸರ್ಜನೆ

ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗ ಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು, ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಸಿಎಂ ಆಗಲಿ ಅಂತ ಪದೇ ಪದೆ ಹೇಳಿಕೆ ಕೊಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆದು ಬಹುಮತದ ಸರ್ಕಾರ ಬರಲಿ ಎಂಬುದು ಜನರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ. ಭಿನ್ನಾಭಿಪ್ರಾಯವಿದ್ದರೇ ಬಹಿರಂಗವಾಗಿ ಯಾಕೆ ಹೇಳಿಕೆ ನೀಡಬೇಕು, ಸಮನ್ವಯ ಸಮಿತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಮೈತ್ರಿಯಲ್ಲಿನ ಗೊಂದಲ ಪರಿಹರಿಸಲು ಸಾಧ್ಯವಾಗದಿದ್ದ ಮೇಲೆ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುವುದು ಉತ್ತಮ ಎಂದು ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬೆಂಬಲ ಮುಂದುವರಿಕೆ: ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಜೆಡಿಎಸ್ ಬೆಂಬಲ ಮುಂದುವರಿಯಲಿದೆ ಎಂದು ಜೆಡಿಎಸ್ ಸರ್ವೋಚ್ಚ ನಾಯಕ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಂಧ್ರದ ಕಿತ್ತೂರಲ್ಲಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳು ಆಗಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಅದಕ್ಕೆ ಪ್ರತಿಕ್ರಿಯಿಸಿದ ದೇವೇಗೌಡರು , ನಾವು ಯಾವಾಗಲೂ ಕಾಂಗ್ರೆಸ್‍ಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಮೊದಲು ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗಲು ದೇವೇಗೌಡರು ಬೆಂಬಲ ನೀಡುವುದಾಗಿ ಘೋಷಿಸಿದ್ದರು.ಮೇ 23ರಂದು ಇಡೀ ದೇಶದ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದ್ದಾರೆ.

Translate »