ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಸಿಕ್ಕಿಬಿದ್ದ ಜೆಡಿಎಸ್ ಮುಖಂಡನ ಪುತ್ರ
ಮೈಸೂರು

ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಸಿಕ್ಕಿಬಿದ್ದ ಜೆಡಿಎಸ್ ಮುಖಂಡನ ಪುತ್ರ

April 23, 2019

ಶಿವಮೊಗ್ಗ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಅಪ್ಪಾಜಿ ಗೌಡ ಅವರ ಪುತ್ರ ಅಜಿತ್ ಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿಯ ಎಂಪಿಎಂ ಸುರಗಿ ತೋಪಿನಲ್ಲಿ ಅಜಿತ್ ಕುಮಾರ್ ಹಣ ಹಂಚುತ್ತಿದ್ದರು. ಈ ಕುರಿತು ಐಟಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಹೀಗಾಗಿ ಎಂಪಿಎಂ ಠಾಣೆಯ ಪೆÇಲೀಸರ ಸಹಕಾರದಿಂದ ದಾಳಿ ಮಾಡಿದ ಅಧಿಕಾರಿಗಳು 1.39 ಲಕ್ಷ ರೂ. ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿತ್ತು 2.30 ಕೋಟಿ ರೂ.! ಅಜಿತ್ ಕುಮಾರ್ ಬೆಳಗ್ಗೆಯಿಂದಲೇ ಭದ್ರಾವತಿಯ ವಿವಿಧ ಗ್ರಾಮಗಳಿಗೆ ತೆರಳಿ ಮತದಾರರಿಗೆ ಹಣ ಹಂಚುತ್ತಿದ್ದರು. ಮಧ್ಯಾಹ್ನ ಎಂಪಿಎಂ- ಸುರಗಿ ತೋಪಿಗೆ ಬಂದಾಗ ಐಟಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮಂಗಳ ವಾರ ನಡೆಯಲಿದ್ದು, ಕುರುಡು ಕಾಂಚಾಣ ಭಾರೀ ಸದ್ದು ಮಾಡುತ್ತಿದೆ. ಬೆಂಗಳೂರಿ ನಿಂದ ಶಿವಮೊಗ್ಗ ಹಾಗೂ ಭದ್ರಾವತಿಗೆ ಕಾರಿನ ಸ್ಟೆಪ್ನಿ ಟೈರ್ ಒಳಗಡೆ ಸಾಗಿಸುತ್ತಿದ್ದ 2.30 ಕೋಟಿ ರೂ.ವನ್ನು ಶನಿವಾರ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಅವರಿಗೆ ಐಟಿಯಿಂದ ನೋಟಿಸ್ ಜಾರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮಾಜಿ ಶಾಸಕರ ಓರ್ವ ಆಪ್ತನನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

Translate »