ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ 6894 ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ
ಚಾಮರಾಜನಗರ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ 6894 ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

March 3, 2020

ಚಾಮರಾಜನಗರ, ಮಾ.2- ನಾಳೆಯಿಂದ (ಮಾ.4) ದ್ವೀತಿಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆ ಹಾಗೂ ಕೈಗೊಳ್ಳಬೇಕಿರುವ ಅಗತ್ಯ ಕಾರ್ಯಗಳ ಕುರಿತು ಈಗಾಗಲೇ ಸಭೆ ನಡೆಸಿ ಸೂಚಿಸ ಲಾಗಿದೆ. ಪರೀಕ್ಷಾ ಕೇಂದ್ರಗಳ ಕೊಠಡಿ ಮೇಲ್ವಿ ಚಾರಕರನ್ನು ರ್ಯಾಂಡ್ ಮೈಸೇಷನ್ ಮೂಲಕ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಸಿಬ್ಬಂದಿ ಗಳಿಗೆ ಗುರುತಿನ ಚೀಟಿ ವಿತರಿಸಲಾಗಿದೆ ಎಂದರು.

ಪರೀಕ್ಷಾ ಅಕ್ರಮ ತಡೆಯಲು ಜಿಲ್ಲಾ ಜಾಗೃತ ದಳ ನೇಮಿಸಲಾಗಿದೆ. ಆಯಾ ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳು ನಡೆಯ ದಂತೆ ನಿಗಾ ವಹಿಸಲು ಆಯಾ ತಾಲೂಕಿನ ತಹಸೀಲ್ದಾರ್‍ರನ್ನು ನೇಮಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆ, ಉತ್ತರ ಪತ್ರಿಕೆ ಬಂಡಲ್‍ಗಳನ್ನು ತಲುಪಿಸಲು ಎಲ್ಲಾ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸ ಲಾಗಿದೆ ಎಂದರು.

ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಾಗಲೀ ಅಥವಾ ಪರೀಕ್ಷೆಗೆ ನಿಯೋಜಕರಾದ ಸಿಬ್ಬಂದಿ ಯಾಗಲೀ ಮೊಬೈಲ್ ಫೋನ್ ತರುವಂತಿಲ್ಲ. ವಿದ್ಯಾರ್ಥಿಗಳು ಇ-ಕ್ಯಾಮರಾ, ಲ್ಯಾಪ್‍ಟಾಪ್, ಕ್ಯಾಲ್ಕುಲೇಟರ್ ಇತರೆ ವಿದ್ಯುನ್ಮಾನ ಉಪಕರಣ ಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಗೋಡೆ ಗಡಿಯಾರ ಹಾಕಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಬಿದ್ದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಶುಶÀ್ರೂಶಕರನ್ನು ನಿಯೋ ಜಿಸಲಾಗುತ್ತದೆ ಎಂದರು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗಿ ಬರಲು ಅನುಕೂಲ ವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ವಿದ್ಯಾರ್ಥಿ ಗಳು ಪ್ರವೇಶಪತ್ರ ತೋರಿಸಿ ಸಾರಿಗೆ ಬಸ್‍ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದಾಗಿದೆ ಎಂದರು.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯನ್ನು ಸಿಆರ್‍ಪಿಸಿ 144ರ ಕಲಂ ಅನ್ವಯ ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ನಿಷೇಧಾಜ್ಞೆ ಹೊರಡಿಸಲಾಗಿದೆ. ಅಲ್ಲದೇ ಜೆರಾಕ್ಸ್ ಅಂಗಡಿಗಳನ್ನು ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚುವಂತೆಯೂ ಆದೇಶಿಸಲಾಗಿದೆ. ಯಾವುದೇ ಪರೀಕ್ಷಾ ಅಕ್ರಮಕ್ಕೆ ಅವಕಾಶವಾಗದಿರಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ಮುಕ್ತ ವಾತಾವರಣದಲ್ಲಿ ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯಿದೆ 2017ನ್ನು ಜಾರಿಗೆ ತರಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಮಾರಾಟ, ಇನ್ನಿತರ ವದಂತಿಗಳನ್ನು ಹರಡುವ, ಪರೀಕ್ಷಾ ಅಕ್ರಮಕ್ಕೆ ಸಹಕರಿಸುವ, ಪ್ರೇರೇಪಿಸುವ, ಪ್ರೋತ್ಸಾಹಿಸುವ ವ್ಯಕ್ತಿಗಳಿಗೆ 5 ವರ್ಷಗಳ ಸೆರೆವಾಸ 5 ಲಕ್ಷ ರೂ. ದಂಡ ವಿಧಿಸಲಾಗು ವುದು. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆಯನ್ನು ಆತ್ಮ ಸ್ಥೈರ್ಯದಿಂದ ಎದುರಿಸಬೇಕೆಂದು ಜಿಲ್ಲಾ ಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಂಜು ಕೋಡಿ ಉಗನೆ ಸೇರಿದಂತೆ ಇತರರು ಹಾಜರಿದ್ದರು.

Translate »