ಕೇಂದ್ರದ ವಿರುದ್ಧ ಕಾರ್ಮಿಕ ಸಂಘಟನೆಗಳ ಮುಷ್ಕರ
ಚಾಮರಾಜನಗರ

ಕೇಂದ್ರದ ವಿರುದ್ಧ ಕಾರ್ಮಿಕ ಸಂಘಟನೆಗಳ ಮುಷ್ಕರ

January 9, 2020

ಚಾಮರಾಜನಗರ, ಜ.8(ಎಸ್‍ಎಸ್)- ಕೇಂದ್ರ ಸರ್ಕಾರ ಆರ್ಥಿಕ, ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಮುಷ್ಕರ ಜಿಲ್ಲೆಯಲ್ಲೂ ನಡೆಯಿತು.

ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಅಂಗನವಾಡಿ ನೌಕರರ ಸಂಘ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU), ಸೆಂಟರ್ ಆಫ್ ಟ್ರೇಡ್ ಯೂನಿ ಯನ್ಸ್ (ಅIಖಿU), ಮಧ್ಯಾಹ್ನದ ಬಿಸಿಯೂಟ ಯೋಜನೆಯ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘಟನೆ ಗಳು ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದವು.

ಇಲ್ಲಿನ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದಿಂದ ಪ್ರತಿಭಟನೆ ಆರಂಭಿಸಿದ ಸಂಘಟನೆಗಳ ಕಾರ್ಯಕರ್ತರು, ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ತಾಲೂಕು ಕಚೇರಿಗೆ ತೆರಳಿ ಧರಣಿ ನಡೆಸಿದರು. ನಂತರ ಉಪ ತಹಶೀ ಲ್ದಾರ್ ತಬಸೂಮ್ ಅವರಿಗೆ ಮನವಿ ಸಲ್ಲಿಸಿದರು. ರಾಷ್ಟ್ರೀಯ ಸಮಾನ ಕನಿಷ್ಠ ವೇತನ 21 ಸಾವಿರ ರೂ. ನಿಗದಿ ಆಗಬೇಕು. ಕಾರ್ಪೊರೇಟ್ ಬಂಡವಾಳದ ಪರವಾದ ಮತ್ತು ಕಾರ್ಮಿಕ ವಿರೋಧಿಯಾದ ಕಾರ್ಮಿಕ ಕಾನೂನುಗಳ ಸಂಹಿತೀಕರಣ ವಿರೋಧಿಸಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ಕೋರ್ಟ್ ಗಳನ್ನು ಸ್ಥಾಪಿಸಬೇಕು. ಎಲ್ಲರಿಗೂ ಸರ್ಕಾರದಿಂದಲೇ 10 ಸಾವಿರ ಕನಿಷ್ಠ ಖಾತ್ರಿ ಪಿಂಚಣಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಆರ್ಥಿಕ ಹಿಂಜರಿತಕ್ಕೆ ಕಾರಣವಾದ ನೀತಿಗಳ ವಿರುದ್ಧ, ಈ ನೀತಿಗಳಿಂದಾಗಿ ಉದ್ಯೋಗ ಕಳೆದುಕೊಳ್ಳುತ್ತಿರುವ ಕಾರ್ಮಿಕರ ಉದ್ಯೋಗ ಮತ್ತು ಆದಾಯಗಳ ರಕ್ಷಣೆ ಮಾಡಬೇಕು ಹಾಗೂ ಉದ್ಯೋಗ ಸೃಷ್ಠಿ ಮಾಡಬೇಕು. ಗ್ರಾಮೀಣ ಸಂಕಷ್ಟವನ್ನು ಕಡಿಮೆ ಮಾಡಲು ಹೆಚ್ಚಿನ ಸಾರ್ವಜನಿಕ ಹೂಡಿಕೆಗಾಗಿ ಬೆಲೆ ಏರಿಕೆ ನಿಯಂತ್ರಣ ಮಾಡುವಂತೆ ಒತ್ತಾಯಿಸಿದರು. ಎಲ್ಲಾ ನೌಕರರಿಗೆ ಎಲ್‍ಐಸಿ, ಆಧಾರಿತ ಪಿಂಚಣಿ ಜಾರಿ ಮಾಡಬೇಕು. ಎಲ್ಲಾ ನೌಕರರನ್ನು ಖಾಯಂ ಮಾಡಬೇಕು. ಬೆಲೆ ಏರಿಕೆ ನಿಯಂತ್ರಿ ಸಬೇಕು. ಜೀವನಾವಶ್ಯಕ ವಸ್ತುಗಳನ್ನು ಸಾರ್ವ ಜನಿಕ ಪಡಿತರ ಮೂಲಕ ವಿತರಿಸುವ ವ್ಯವಸ್ಥೆ ಜಾರಿ ಮಾಡಬೇಕು. ಖಾಯಂ ಸ್ವರೂಪದ ಉದ್ಯೋಗಗಳನ್ನು ಸೃಷ್ಠಿಸುವಂತೆ ಪ್ರತಿ ಭಟನಾಕಾರರು ಒತ್ತಾಯಿಸಿದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಸುಜಾತ, ತಾಲೂಕು ಅಧ್ಯಕ್ಷೆ ರೇವಮ್ಮ, ಕಾರ್ಯದರ್ಶಿ ಷಹಿದಾಬಾನು, ಖಜಾಂಚಿ ಯಶೋಧರಮ್ಮ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಶಿವಮ್ಮ, ಪ್ರಧಾನ ಕಾರ್ಯದರ್ಶಿ ಪದ್ಮ, ಮುಖಂಡರಾದ ತಾರಾಕುಮಾರಿ, ಶಾಂತಮ್ಮ, ರತ್ನಮ್ಮ, ಪಾರ್ವತಮ್ಮ, ಲೀಲಾ, ಗೀತಾ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Translate »