ಮೇ 25ರೊಳಗೆ ಬಾಕಿ ಪಾವತಿಗೆ ಕಬ್ಬು ಬೆಳೆಗಾರರ ಆಗ್ರಹ
ಮೈಸೂರು

ಮೇ 25ರೊಳಗೆ ಬಾಕಿ ಪಾವತಿಗೆ ಕಬ್ಬು ಬೆಳೆಗಾರರ ಆಗ್ರಹ

May 16, 2019

ಮೈಸೂರು: ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಕೊಡಬೇಕಾದ ಬಾಕಿ ಹಣವನ್ನು ಮೇ 25ರೊಳಗೆ ಪಾವತಿಸದಿದ್ದರೆ, ಬೆಂಗಳೂರಿ ನಲ್ಲಿರುವ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕುವು ದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ 67 ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 4 ಸಾವಿರ ಕೋಟಿ ರೂ. ಹಣವನ್ನು ಬಾಕಿ ನೀಡಬೇಕಾಗಿದೆ. ಎಲ್ಲಾ ಕಾರ್ಖಾನೆಗಳ ಆಡಳಿತ ಮಂಡಳಿ ಕಬ್ಬು ಬೆಳೆಗಾರರನ್ನು ವಂಚಿಸಲು ಯತ್ನಿಸುತ್ತಿವೆ. ಉತ್ಪಾದನಾ ವೆಚ್ಚ ಹೆಚ್ಚಾಗಿರುವುದಲ್ಲದೆ ಉತ್ತಮ ಬೆಲೆ ಸಿಗದೆ ರೈತರು ಕಂಗಾಲಾಗಿ ಸಂಕಷ್ಟಕ್ಕೆ ಸಿಲುಕಿದ್ದರೂ ಬಾಕಿ ಹಣ ಪಾವತಿಸಲು ಕಾರ್ಖಾನೆಗಳು ಹಿಂದೇಟು ಹಾಕುತ್ತಿರುವುದು ಖಂಡನೀಯ. ರೈತ ರನ್ನು ಶೋಷಿಸುತ್ತಿರುವ ಸಕ್ಕರೆ ಕಾರ್ಖಾನೆ ವಿರುದ್ದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಜಾರಿದೆ. ಈ ಹಿನ್ನೆಲೆ ಯಲ್ಲಿ ಮೇ 25ರೊಳಗೆ ಬಾಕಿ ಹಣ ನೀಡಬೇಕು. ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಪಾವತಿಗೆ ಮುಂದಾಗ ದಿದ್ದರೆ ಬೆಂಗಳೂರಿನ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ರಾಜ್ಯದ ಬರ ಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಭೇಟಿ ನೀಡಿ, ಆಯಾ ಜಿಲ್ಲಾ ಉಸ್ತುವಾರಿ ಸಚಿª Àರೊಂದಿಗೆ ಸಭೆ ನಡೆಸಬೇಕು. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಯೋಜನೆಯನ್ನು ಜಾರಿಗೊಳಿಸಬೇಕು. ಸರ್ಕಾರ ಚುನಾವಣಾ ಗುಂಗಿನೊಂದಿಗೆ ನಿದ್ರಾ ವ್ಯವಸ್ಥೆಗೆ ಜಾರಿದೆ. ಮುಖ್ಯಮಂತ್ರಿ ಸೇರಿದಂತೆ ಬಹುತೇಕ ಎಲ್ಲಾ ಸಚಿವರು ಅಭಿವೃದ್ಧಿಯತ್ತ ಗಮನ ಹರಿಸದೆ ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಈ ಹಿನ್ನೆಲೆ ಯಲ್ಲಿ ಬರಗಾಲದ ಕಾಮಗಾರಿ ಮತ್ತು ಕೃಷಿ ಚಟುವಟಿಕೆಗಳಲ್ಲಿ ನರೇಗಾ ಯೋಜನೆಯನ್ನು ಅಳವಡಿಸಿ ಬರ ಪರಿ ಹಾರ ನಷ್ಟ ಕೊಡಿಸಲು ಸರ್ಕಾರಗಳು ಮುಂದಾಗಬೇಕು ಎಂದು ಆಗ್ರಹಿಸಿದರು.

ಚುನಾವಣೆ ಮುಗಿದ್ದು ತಿಂಗಳಾದರೂ ನೀತಿ ಸಂಹಿತೆಯನ್ನು ಜಾರಿಯಲ್ಲಿಟ್ಟಿರು ವುದು ಸರಿಯಲ್ಲ. ಇದರಿಂದ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ, ರೈತರ ಸಮಸ್ಯೆ ಈಡೇರಿಕೆಗೆ ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡು ಚುನಾವಣಾ ಆಯೋಗ ಕೂಡಲೇ ನೀತಿ ಸಂಹಿತೆಯನ್ನು ಮೊಟಕುಗೊಳಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದ ಸಮ್ಮಿಶ್ರ ಸರ್ಕಾರದ ಪಾಲು ದಾರ ಪಕ್ಷಗಳು ಅಧಿಕಾರಕ್ಕೆ ಬರುವ ಮುನ್ನಾ ರೈತರ ಮೇಲಿನ ಮೊಕದ್ದಮೆ ಗಳನ್ನು ವಜಾಗೊಳಿಸಲಾಗುವ ಭರವಸೆ ಗಳನ್ನು ನೀಡಿದ್ದವು. ಈಗ ತಮ್ಮ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಮೊಕದ್ದಮೆಗಳನ್ನು ಹಿಂಪಡೆಯುತ್ತಿದೆ. ರೈತರ ಮೇಲೆ ದಾಖಲಿಸಿರುವ ಮೊಕ ದ್ದಮೆಯನ್ನು ರದ್ದುಗೊಳಿಸಬೇಕು. ರಾಜ್ಯದ ರೈತರ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರದ ಗಮನ ಸೆಳೆಯಲು ಕಾರ್ಯಕ್ರಮ ರೂಪಿಸುವ ಸಲುವಾಗಿ ಮೇ 20ರಂದು ನಗರದ ಚೇತನ್ ಗಾರ್ಡ್‍ನಲ್ಲಿ ಮಧ್ಯಾಹ್ನ 2ಕ್ಕೆ ಸಭೆ ಕರೆಯಲಾಗಿದೆ. ಅದೇ ದಿನ ಬೆಳಿಗ್ಗೆ 11.30ಕ್ಕೆ ಜೆಎಸ್‍ಎಸ್ ಶತಮಾನೋತ್ಸವ ಸಭಾಂಗಣದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉಪಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಆರ್ಥಿಕ ಸಲಹೆಗಾರ ಡಾ.ಗೀತಾ ಗೋಪಿ ನಾಥ್ ಅವರಿಗೆ ಅಭಿನಂದನಾ ಸಮಾ ರಂಭ ಏರ್ಪಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಪ್ರಧಾನ ಕಾರ್ಯದರ್ಶಿ ಕಿರಗಸೂರ್ ಶಂಕರ್, ತಾಲ್ಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್, ಬರಡನಪುರ ನಾಗರಾಜು, ಹಾಡ್ಯ ರವಿ ಇದ್ದರು.

Translate »