ತುಲಾ ಸಂಕ್ರಮಣ; ಅಗತ್ಯ ಸಿದ್ಧತೆಗೆ ಸೂಚನೆ
ಕೊಡಗು

ತುಲಾ ಸಂಕ್ರಮಣ; ಅಗತ್ಯ ಸಿದ್ಧತೆಗೆ ಸೂಚನೆ

October 2, 2018

ಮಡಿಕೇರಿ:  ಅ.17 ರಂದು ಜರುಗುವ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅ.17 ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ಪುಣ್ಯಕಾಲ ಜರುಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಬಸ್ ಕಲ್ಪಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಮಡಿಕೇರಿಯಿಂದ ತಲಕಾವೇರಿವರೆಗೆ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಬದಿ ಕಾಡು ಕಡಿಯುವುದು, ಸುಣ್ಣ ಬಣ್ಣ ಬಳಿಯುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರಿಗೆ ಪಿ.ಐ.ಶ್ರೀವಿದ್ಯಾ ನಿರ್ದೇಶನ ನೀಡಿದರು. ಭಾಗಮಂಡಲದಿಂದ ತಲಕಾವೇರಿ ವರೆಗೆ ಬೀದಿ ದೀಪ ಅಳವಡಿಸುವುದು, ಹಾಗೆಯೇ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೆಸ್ಕ್ ಇಲಾಖೆ ಎಂಜಿನಿಯ ರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ತಲಕಾವೇರಿ ಕುಂಡಿಕೆ ಹಾಗೂ ಕೊಳದ ಬಳಿ ನೂಕುನುಗ್ಗಲು ಉಂಟಾಗದಂತೆ ಅಗತ್ಯ ಬ್ಯಾರಿಕೇಡ್ ಗಳನ್ನು ಅಳವಡಿಸಬೇಕು. ಗಣ್ಯ ವ್ಯಕ್ತಿಗಳು, ಅತಿಥಿಗಳು, ಒಬಿ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡು ವಂತೆ ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದರು. ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು. ತುರ್ತು ಸಂದರ್ಭ ನಿರ್ವಹಿಸಲು ಅಗ್ನಿ ಶಾಮಕ ದಳ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳನ್ನು ನಿಯೋ ಜಿಸುವಂತೆ ಸೂಚನೆ ನೀಡಿದರು. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯುವುದು. ಆಂಬ್ಯುಲೆನ್ಸ್ ಕಲ್ಪಿಸುವುದು, ನುರಿತ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸು ವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಜಾತ್ರೆ ಸಂದರ್ಭ ದಲ್ಲಿಯೂ ಪ್ಲಾಸ್ಟಿಕ್‍ನ್ನು ಬಳಸಬಾರದು, ಈ ಬಗ್ಗೆ ಮಾಹಿತಿ ನೀಡಬೇಕು. ಅಗತ್ಯವಿರುವ ಕಡೆ ಡಸ್ಟ್‍ಬಿನ್ ಗಳನ್ನು ಇಡುವಂತೆ ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ, ತಲಕಾವೇರಿ, ಭಾಗ ಮಂಡಲಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಕಲ್ಪಿಸುವುದು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಭಾಗಮಂಡಲ ಗ್ರಾ.ಪಂ.ಪಿಡಿಓಗೆ ಸೂಚಿಸಿದರು.

ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರ ಕಾರ್ಮಿಕ ರನ್ನು ನಿಯೋಜಿಸಲು ನಗರಸಭೆ ಪೌರಾಯುಕ್ತರಿಗೆ ಪತ್ರ ಬರೆಯುವಂತೆ ತಾಪಂ ಇಒಗೆ ಸಲಹೆ ಮಾಡಿ ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು, ತುಲಾ ಸಂಕ್ರಮಣ ಜಾತ್ರೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ವಾಹನ ಸುಗಮ ಸಂಚಾರಕ್ಕೆ ಅಗತ್ಯ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಭಾಗಮಂಡಲ-ಭಗಂಡೇಶ್ವರ-ತಲಕಾವೇರಿ ದೇವಾ ಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಮಾತನಾಡಿ, ಅರ್ಚಕರು ಮತ್ತು ತಕ್ಕ ಮುಖ್ಯಸ್ಥರು ಕುಂಡಿಕೆ ಬಳಿ ಇರುತ್ತಾರೆ. ಉಳಿದಂತೆ ಗಣ್ಯರು, ಪತ್ರಕರ್ತರು ಒಂದು ಕಡೆ ಇರುತ್ತಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತುಲಾ ಸಂಕ್ರಮಣ ಒಂದು ತಿಂಗಳವರೆಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೋರಿದರು. ಜಾತ್ರೆ ಸಂದರ್ಭದಲ್ಲಿ ಶಾಮಿಯಾನ, ಧ್ವನಿವರ್ಧಕ ವ್ಯವಸ್ಥೆ, ತೀರ್ಥೋದ್ಭವ ದಿನದಂದು ಭಕ್ತಾಧಿಗಳಿಗೆ ನೇರ ವೀಕ್ಷಣೆಗೆ ಎಲ್.ಸಿ.ಡಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಭಕ್ತಾಧಿಗಳಿಗೆ ಯಾವುದೇ ತೊಂದರೆ ಯಾಗದಂತೆ ಗಮನ ಹರಿಸಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕೆ.ಟಿ.ದರ್ಶನ್ ಮಾಹಿತಿ ನೀಡಿದರು. ಕೃಷಿ ಮತ್ತು ತೋಟ ಗಾರಿಕೆ ಇಲಾಖೆ ವತಿಯಿಂದ ರೈತರ ಅನುಕೂಲಕ್ಕಾಗಿ ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಗಿರೀಶ್ ಹೇಳಿದರು.

ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ, ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಸೆಸ್ಕ್ ಎಇಇ ದೇವಯ್ಯ, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕಿ ಗೀತಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ನಳವಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೋ, ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಇಒ ಜಗದೀಶ್ ಕುಮಾರ್ ಇತರರು ಹಲವು ಮಾಹಿತಿ ನೀಡಿದರು.

Translate »