ಕೇಂದ್ರದಲ್ಲಿ ಯುಪಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಮುನ್ಸೂಚನೆ
ಮೈಸೂರು

ಕೇಂದ್ರದಲ್ಲಿ ಯುಪಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಮುನ್ಸೂಚನೆ

December 15, 2018

ತಿ.ನರಸೀಪುರ:  ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಮುನ್ಸೂಚನೆಯಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ಯಾಗುವುದು ಬಹುತೇಕ ಖಚಿತ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ಯುವ ಘಟಕದ ಅಧ್ಯಕ್ಷ ಟಿ.ಎಸ್.ಲೋಕೇಶ್ ಭವಿಷ್ಯ ನುಡಿದರು.

ತಾಲೂಕಿನ ಬನ್ನೂರು ಪಟ್ಟಣದಲ್ಲಿ ರುವ ಸರ್ಕಾರಿ ಅತಿಥಿ ಗೃಹದಲ್ಲಿ ಕರೆಯ ಲಾಗಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪೂರ್ವದಲ್ಲೇ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಜನರು ಜೈ ಎಂದಿದ್ದು, ಮುಂದಿನ ಪ್ರಧಾನಿಯನ್ನಾಗಿ ಮಾಡು ತ್ತೇವೆ ಎಂಬ ಸಂದೇಶವನ್ನು ನೀಡಿದ್ದಾರೆ ಎಂದರು.

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ನಾಯಕತ್ವವನ್ನು ಬಲಪಡಿಸಲಿಕ್ಕೆ ಚಾಮ ರಾಜನಗರ ಹಾಗೂ ಮೈಸೂರು- ಕೊಡಗು ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಿ ಸುತ್ತೇವೆ. ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಹಾಗೂ ಮುಖಂಡ ಸುನೀಲ್ ಬೋಸ್ ನೇತೃತ್ವದಲ್ಲಿ ಶಕ್ತಿ ಯೋಜನೆಯಡಿ ಸದಸ್ಯತ್ವ ನೊಂದಣಿ ಯನ್ನು ಯಶಸ್ವಿಯಾಗಿ ನಡೆಸುತ್ತೇವೆ ಎಂದು ಟಿ.ಎಸ್.ಲೋಕೇಶ್ ತಿಳಿಸಿದರು.

ಕೆಪಿಸಿಸಿ ಸದಸ್ಯ ಕೆ.ಎಸ್.ಧನಂಜಯ ಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತರೂಢ ಬಿಜೆಪಿ ಸರ್ಕಾರದ ನಾಲ್ಕೂವರೆ ವರ್ಷಗಳ ಆಡಳಿತದಿಂದ ಬೇಸತ್ತಿದ್ದ ಜನರು ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಯನ್ನು ಸಂಪೂರ್ಣವಾಗಿ ತಿರಸ್ಕರಿಸಿ ದ್ದಾರೆ. ಹಿಂದಿನ ಯುಪಿಎ ಸರ್ಕಾರದ ಜನಪರ ಆಡಳಿತವನ್ನು ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಜನರು ಉತ್ಸುಕರಾಗಿ ದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಕೊಡಗಹಳ್ಳಿ ರಮೇಶ, ಮುಖಂಡ ರಾದ ಹನುಮನಾಳು ಮರೀಗೌಡ, ಹೋಟೇಲ್ ರಾಮು ಹಾಗೂ ಟಿ.ಆರ್. ಸುರೇಶ್ ಉಪಸ್ಥಿತರಿದ್ದರು.

Translate »