ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಲು ಆಗ್ರಹ
ಮೈಸೂರು

ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಲು ಆಗ್ರಹ

August 8, 2019

ಮೈಸೂರು,ಆ.7(ಆರ್‍ಕೆಬಿ)-ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು ಎಂದು ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಬುಧವಾರ ನಡೆದ ಎಐಡಿಎಸ್‍ಓ 5ನೇ ಮೈಸೂರು ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ ಸರ್ಕಾರವನ್ನು ಆಗ್ರಹಪಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‍ಒ ನ ಸದಸ್ಯರು, ಸರ್ಕಾರಿ ಶಾಲಾ ಕಾಲೇಜುಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು. ಅವಶ್ಯಕತೆಗೆ ತಕ್ಕಂತೆ ಸರ್ಕಾರಿ ಶಾಲೆಗಳನ್ನು ತೆರೆಯಬೇಕು. ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಅಗತ್ಯವಿರುವಷ್ಟು ಖಾಯಂ ಸಿಬ್ಬಂದಿಯನ್ನು ಒದಗಿಸಿ, ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕು. ವಿದ್ಯಾರ್ಥಿ ಗಳಿಗೆ ಭದ್ರತೆಯನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಜಿ¯್ಲÉಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಮತ್ತು ಕಾನೂನು ಕಾಲೇಜುಗಳನ್ನು ಪ್ರಾರಂಭಿಸಬೇಕು. ಹೀಗೆ ಹತ್ತು ಹಲವು ವಿದ್ಯಾರ್ಥಿ ಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ನೂರಾರು ವಿದ್ಯಾರ್ಥಿಗಳನ್ನು ಒಳಗೊಂಡ ರ್ಯಾಲಿ, ರಾಮಸ್ವಾಮಿ ವೃತ್ತದಿಂದ ಹೊರಟು ಸಮ್ಮೇಳನ ಸ್ಥಳ ತಲುಪಿತು. ಈ ಸಂದರ್ಭದಲ್ಲಿ ಎಐಡಿಎಸ್‍ಒ ರಾಜ್ಯ ಕಾರ್ಯದರ್ಶಿ ಕೆ.ಎಸ್. ಅಶ್ವಿನಿ, ಜಿ¯್ಲÁ ಕಾರ್ಯದರ್ಶಿ ಬಿ.ರವಿ, ರಾಜ್ಯ ಸೆಕ್ರೆಟೇರಿಯೇಟ್ ಸದಸ್ಯ, ಜಿ¯್ಲÁಧ್ಯP್ಷÀ ಆಕಾಶ್‍ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Translate »