ಗೋಣಿಕೊಪ್ಪಲು: ಕಾಡಾನೆ ದಾಳಿಗೆ ಕಾರ್ಮಿಕ ಬಲಿಯಾಗಿರುವ ಘಟನೆ ನಾಗರಹೊಳೆ ರಕ್ಷಿತಾರಣ್ಯದ ಹುಲಿ ಸಂರಕ್ಷಿತ ವಲಯದಲ್ಲಿ ನಡೆದಿದೆ. ಗೋಣಿಗದ್ದೆ ಹಾಡಿಯ ತಿಮ್ಮಯ್ಯ (30) ಮೃತ ಕಾರ್ಮಿಕ.
ಭಾನುವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ. ದಾಳಿಯಿಂದ ತಿಮ್ಮಯ್ಯ ಸ್ಥಳದ ಲ್ಲಿಯೇ ಮೃತಪಟ್ಟಿದ್ದು, ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಪೌಲ್ ಅಂಥೋನಿ, ಆರ್‍ಎಫ್‍ಒ ಅರವಿಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿದರು.