ಗ್ರಾಮ ವಿದ್ಯುತ್ ಪ್ರತಿನಿಧಿ ಮೇಲೆ ಹಲ್ಲೆ
ಚಾಮರಾಜನಗರ

ಗ್ರಾಮ ವಿದ್ಯುತ್ ಪ್ರತಿನಿಧಿ ಮೇಲೆ ಹಲ್ಲೆ

October 1, 2018

ಚಾಮರಾಜನಗರ: ಮನೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಎಂಬ ಕಾರಣಕ್ಕೆ ಗ್ರಾಮ ವಿದ್ಯುತ್ ಪ್ರತಿನಿಧಿಯೊಬ್ಬರ ಮೇಳೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೊಡಿಉಗನೆ ಗ್ರಾಮದ ಬಳಿ ನಡೆದಿದೆ.

ತಾಲೂಕಿನ ಬಿಸಲವಾಡಿ ಗ್ರಾಮದ ಗ್ರಾಮ ವಿದ್ಯುತ್ ಪ್ರತಿನಿಧಿ ಎನ್.ಕುಮಾರ್ ಹಲ್ಲೆ ಗೊಳಗಾದವರು. ದೇ ಗ್ರಾಮದ ಮಲ್ಲಿಕಾರ್ಜುನ ಎಂಬುವರು ಹಲ್ಲೆ ನಡೆಸಿದವರು. ಈ ಬಗ್ಗೆ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಲ್ಲಿಕಾರ್ಜುನ ತಮ್ಮ ಮನೆಯ ವಿದ್ಯುತ್ ಬಿಲ್ ಹಣ 1300 ರೂ. ಪಾವತಿಸಿರ ಲಿಲ್ಲ. ಇದರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಇದರಿಂದ ಕುಪಿತಗೊಂಡ ಮಲ್ಲಿಕಾರ್ಜುನ ಗ್ರಾಮದ ವಿದ್ಯುತ್ ಪ್ರತಿನಿಧಿ ಕುಮಾರ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ರಶೀತಿ ಪುಸ್ತಕ ಹರಿದಿದ್ದಾನೆ ಎಂದು ದೂರು ದಾಖಲಾಗಿದೆ. ಈ ಸಂಬಂಧ ದೂರನ್ನು ದಾಖಲಿಸಿಕೊಂಡಿರುವ ರಾಮ ಸಮುದ್ರ ಠಾಣೆಯ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Translate »