ಸಿದ್ದಾಪುರ, ಏ.28- ಕೊರೊನಾ ಮಹಾ ಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಫ್ರ್ಯೂ ಘೋಷಣೆಗೆ ಸಿದ್ದಾಪುರ, ನೆಲ್ಯಹುದಿ ಕೇರಿ, ಪಾಲಿಬೆಟ್ಟ, ಅಮ್ಮತ್ತಿ, ಚೆನ್ನಯ್ಯನ ಕೋಟೆ, ಮಾಲ್ದಾರೆ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲೂ ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟಗಳನ್ನು ಮುಚ್ಚಿ ಕಫ್ರ್ಯೂ ಬಂದ್‍ಗೆ ಸಾರ್ವಜನಿಕರು ಹಾಗೂ ವರ್ತಕರು ಸಹಕರಿಸಿದರು.
ವೈದ್ಯಕೀಯ ಸೇವೆ, ಆಸ್ಪತ್ರೆ, ಪೆಟ್ರೋಲ್ ಬಂಕ್ ಹೊರತುಪಡಿಸಿ ಎಲ್ಲವೂ ಸ್ಥಬ್ಧ ವಾಗಿತ್ತು. ಆಸ್ಪತ್ರೆ ಸೇರಿದಂತೆ ತುರ್ತು ಸಂದರ್ಭಕ್ಕೆ ಸೀಮಿತವಾದ ವಾಹನಗಳು ಮಾತ್ರ ಓಡಾಟವಿತ್ತು. ಸಿದ್ದಾಪುರ ಸೇರಿದಂತೆ ಹಲವೆಡೆ ಕೆಲವು ಬೈಕ್ ಹಾಗೂ ವಾಹನ ಸವಾರರು ಅನಾವಶ್ಯಕವಾಗಿ ಸುತ್ತಾಟ ಮಾಡುತ್ತಿರುವುದನ್ನು ಕಂಡ ಪೆÇಲೀಸರು ಕೆಲವರಿಗೆ ಲಾಠಿ ಬೀಸಿದರು.
ಸಾರ್ವಜನಿಕರು ಮನೆಯಿಂದ ಹೊರಬರದೇ ಮುಖ್ಯ ರಸ್ತೆಗಳು ಬಿಕೋ ಎನ್ನುತ್ತಿತ್ತು. ಬೆಳಿಗ್ಗೆ 10 ಗಂಟೆಯವರೆಗೆ ದಿನಸಿ, ತರಕಾರಿ, ಕೋಳಿ ಮಾಂಸದಂಗಡಿಗಳು ತೆರೆದಿದ್ದವು. ಸಿದ್ದಾಪುರ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಿಂದ ಪಟ್ಟಣಕ್ಕೆ ಬಂದು ಅಗತ್ಯ ಸಾಮಗ್ರಿಗಳನ್ನು ಖರೀದಿಸಿ ತೆರಳಿದರು.
ಪೆÇಲೀಸ್ ವಾಹನದಲ್ಲಿ ಧ್ವನಿವರ್ಧಕ ಬಳಸಿ ಸಾಮಾಜಿಕ ಅಂತರ ಹಾಗೂ ನಿಯಮ ಪಾಲನೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜನರಲ್ಲಿ ಮನವಿ ಮಾಡಿದರು .
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮೈಕ್ ಹಿಡಿದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ನಿಯಮ ಪಾಲನೆ ಮಾಡಬೇಕೆಂದು ಮನವಿ ಮಾಡಿದರು. 10 ಗಂಟೆಯಾ ಗುತ್ತಿದ್ದಂತೆ ಎಲ್ಲ ಅಂಗಡಿ ಮುಂಗಟ್ಟು ಗಳನ್ನು ಬಂದ್ ಮಾಡಿ ಸಹಕರಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರೀನಾ ತುಳಸಿ ಹಾಗೂ ಕೆಲ ಸದಸ್ಯರುಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಾಸ್ಕ್, ಸಾಮಾಜಿಕ ಅಂತರ, ಹಾಗೂ ಸರ್ಕಾರದ ನಿಯಮ ಪಾಲಿಸುವಂತೆ ಮನವಿ ಮಾಡಿದರು.
ಗ್ರಾಮ ಪಂಚಾಯ್ತಿ ಸ್ವಚ್ಛತಾ ಸಿಬ್ಬಂದಿಗಳು ಇಡೀ ಪಟ್ಟಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದರು.
ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ನೇತ್ರತ್ವದಲ್ಲಿ ಎಲ್ಲೆಡೆ ಪೆÇಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.