ಮೈಸೂರು: ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಲ್ಬಣಿ ಸಿಲ್ಲ. ಆದಾಗ್ಯೂ ಬೇಸಿಗೆ ಹಿನ್ನೆಲೆಯಲ್ಲಿ ನೀರಿನ ಕೊರತೆ ಕಂಡು ಬರುವ ಪ್ರದೇಶಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆಗೆ ಪಾಲಿಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ತಿಳಿಸಿದರು.
ಮೈಸೂರಿನ ಜೆಎಲ್‍ಬಿ ರಸ್ತೆಯ ರೋಟರಿ ಶಾಲೆ ಆವರಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಗರ ಪಾಲಿಕೆಯಲ್ಲಿ 20 ನೀರಿನ ಟ್ಯಾಂಕರ್‍ಗಳು ಇದ್ದು, ಹೆಚ್ಚುವರಿಯಾಗಿ ಇನ್ನು 5 ಟ್ಯಾಂಕರ್‍ಗಳಿಗೆ ವ್ಯವಸ್ಥೆ ಮಾಡಲಾಗು ತ್ತಿದೆ. ಚಾಮುಂಡಿ ಬೆಟ್ಟ ಹಾಗೂ ಹಿನಕಲ್ ನಗರ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಚಾಮುಂಡಿಬೆಟ್ಟಕ್ಕೆ ಮನವಿ ಮೇರೆಗೆ ಹಲವು ಬಾರಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡ ಲಾಗಿದೆ ಎಂದು ಪ್ರಶ್ನೆಗಳಿಗೆ ಉತ್ತರಿಸಿದರು.
ವಿಜಯನಗರ ಹಾಗೂ ಕ್ಯಾತಮಾರನಹಳ್ಳಿ ಯಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆ ಯಲ್ಲಿ ಅಲ್ಲಿಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದೆ. ಸದ್ಯ ಮೈಸೂರು ನಗರಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರ ತರವಾಗಿಯೇನೂ ಇಲ್ಲ. ಬೋರ್‍ವೆಲ್ ಮೂಲ ಗಳನ್ನು ಸಮರ್ಪಕ ವಾಗಿ ಬಳಸಿಕೊಂಡು ನೀರಿನ ಸಮಸ್ಯೆ ತಲೆ ದೋರದಂತೆ ಕ್ರಮ ವಹಿಸಲಾಗುವುದು ಎಂದರು.
14ನೇ ಹಣಕಾಸು ಯೋಜನೆಯ ಅನುದಾನ ದಲ್ಲಿ ನೀರಿಗೆ ಸಂಬಂಧಿಸಿದಂತೆ ಶೇ.15ರಷ್ಟು ಹಣ ಮೀಸಲಿರಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಪಾಲಿಕೆ ಆಯುಕ್ತರೊಂದಿಗೆ ಮಾತುಕತೆ ನಡೆಸಲಾ ಗಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಗಳಿಗೆ ತೊಡಕಾಗುವುದು ಬೇಡವೆಂದು ಜಿಲ್ಲಾಧಿಕಾರಿ ಗಳು ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಅದ ರಂತೆ ಪಾಲಿಕೆ ಸ್ಥಾಯಿ ಸಮಿತಿಗಳ ಸಭೆ ನಡೆಸಲು ಅವಕಾಶವಿದೆ. ಆದರೆ ಕೌನ್ಸಿಲ್ ಸಭೆ ನಡೆಸಲು ಅವಕಾಶ ಇಲ್ಲ ಎಂದು ಮಾಹಿತಿ ನೀಡಿದರು.
ಗುಜರಾತಿನಿಂದ ಪಾಲಿಕೆಗೆ ತಂದಿರುವ ಮರ ಕಡಿಯುವ `ಶಕ್ತಿಮಾನ್ ಹೈಡ್ರಾಲಿಕ್’ ಯಂತ್ರ ಆಧಾರಿತ ವಾಹನಕ್ಕೆ ಚಾಲಕನ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ತರಬೇತಿ ಹೊಂದಿದ ಚಾಲಕನನ್ನು ನೇಮಕ ಮಾಡಲಾಗುವುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ತಿಳಿಸಿದರು.
ಒಣಮರ ಹಾಗೂ ರೆಂಬೆ-ಕೊಂಬೆಗಳನ್ನು ಕಟಾವು ಮಾಡಲು ಮೈಸೂರು ಮಹಾನಗರ ಪಾಲಿಕೆ ಸಿದ್ಧವಿದೆ. ಆದರೆ ಈ ಸಂಬಂಧ ನಗರ ಪಾಲಿಕೆ ಒಂದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ವಿಲ್ಲ. ಕಾರಣ ಅರಣ್ಯ ಇಲಾಖೆ ಹಾಗೂ ಪರಿಸರ ವಾದಿಗಳು ಇದಕ್ಕೆ ಅವಕಾಶ ನೀಡುವುದಿಲ್ಲ. ಹೀಗಾಗಿ ಎಲ್ಲರೊಂದಿಗೆ ಸಮನ್ವಯ ಸಾಧಿಸಿ ಒಣಮರ ಹಾಗೂ ಅಪಾಯಕಾರಿ ಕೊಂಬೆಗಳನ್ನು ಕಡಿಯಲು ಕ್ರಮ ಕೈಗೊಳ್ಳಲಾಗುವುದು. ತುರ್ತಾಗಿ ತೆಗೆಯಬೇಕಿರುವ ಅಪಾಯಕಾರಿ ಮರಗಳಿದ್ದರೆ, ನಗರಪಾಲಿಕೆಗೆ ದೂರು ನೀಡಿದರೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಮೇಯರ್ ಭರವಸೆ ನೀಡಿದರು.