ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ
ಮೈಸೂರು

ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ

October 17, 2018

ಮಡಿಕೇರಿ: ನಾಳೆ(ಅ.17) ತಲಕಾವೇರಿಯಲ್ಲಿ ಮಾತೆ ಕಾವೇರಿ ತೀರ್ಥೋದ್ಭವ ಆವಿರ್ಭವಿಸಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡು ಸನ್ನದ್ಧವಾಗಿದೆ.

ಅ.17ರ ಸಂಜೆ 6.43 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾರೆ.

ಈ ಬಾರಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ತೀರ್ಥೋದ್ಭವದ ವೇಳೆ ಭಕ್ತರ ನೂಕು-ನುಗ್ಗಲು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ತೀರ್ಥ ಕೊಳದ ಪ್ರವೇಶ ದ್ವಾರದ ಬಳಿ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದೆ. ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, 3 ಬೃಹತ್ ಎಲ್‍ಇಡಿ ಪರದೆಯನ್ನು ಹಾಕಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀರ್ಥೋದ್ಭವ ವೀಕ್ಷಣೆಗೆ ಅನುಕೂಲವಾಗಲಿದೆ. ಅ.17ರ ಸಂಜೆ 4 ಗಂಟೆವರೆಗೆ ಮಾತ್ರ ತಲ ಕಾವೇರಿಗೆ ಭಕ್ತಾದಿಗಳ ವಾಹನ ಪ್ರವೇಶಕ್ಕೆ ಅನುಮತಿ ನೀಡಿದ್ದು, ಆನಂತರ ನಿರ್ಬಂಧ ಹೇರಲಾಗಿದೆ.

Translate »