ಕೊಡಗಿನಲ್ಲಿ ಬಂದ್ ಇಲ್ಲ: ಖಾಸಗಿ ಬಸ್ ಸಂಚಾರ ಸ್ಥಗಿತ
ಕೊಡಗು

ಕೊಡಗಿನಲ್ಲಿ ಬಂದ್ ಇಲ್ಲ: ಖಾಸಗಿ ಬಸ್ ಸಂಚಾರ ಸ್ಥಗಿತ

September 10, 2018

ಮಡಿಕೇರಿ:  ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಾಂಗ್ರೆಸ್ ಮತ್ತು ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ನಿರ್ಧಾರಕ್ಕೆ ಕೊಡಗು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತಗೊಂಡಿದೆ.

ಜಿಲ್ಲಾ ಕಾಂಗ್ರೆಸ್ ಮತ್ತು ಬಿಜೆಪಿ ಕೊಡಗು ಜಿಲ್ಲೆಯಲ್ಲಿ ಬಂದ್‍ಗೆ ತಮ್ಮ ಬೆಂಬಲವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಆದರೆ, ಜೆಡಿಎಸ್ ಮಾತ್ರ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಅತೀವೃಷ್ಟಿ, ಪ್ರವಾಹ, ಭೂ ಕುಸಿತದಿಂದ ಬಡ ಕಾರ್ಮಿಕ ವರ್ಗ ಕೆಲಸವಿಲ್ಲದೆ ಪರಿತಪಿಸುತ್ತಿರುವುದ ರಿಂದ ವಿವಿಧ ಕಾರ್ಮಿಕ ಸಂಘಟನೆಗಳು ಕೊಡಗು ಜಿಲ್ಲೆಗೆ ಮೀಸಲಾಗಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿಲ್ಲ.

ಕೊಡಗು ಜಿಲ್ಲಾ ಖಾಸಗಿ ಬಸ್ ಮಾಲೀ ಕರ ಸಂಘ, ಜಿಲ್ಲಾ ಟ್ಯಾಕ್ಸಿ ಚಾಲಕರ ಮತ್ತು ಮಾಲೀಕರ ಸಂಘ ಬಂದ್‍ಗೆ ಬೆಂಬಲ ನೀಡಿದ್ದು, ಜಿಲ್ಲೆಯ ಗ್ರಾಮೀಣ ಭಾಗಗ ಳಲ್ಲಿ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತ ಗೊಳ್ಳಲಿದೆ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎನ್ನಲಾಗುತ್ತಿದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪ್ರಕೃತಿ ವಿಕೋಪದ ಬಳಿಕ ಕೆಎಸ್ಆರ್‌ಟಿಸಿ ಮಿನಿ ಬಸ್ ವ್ಯವಸ್ಥೆ ಮಾಡಿದ್ದು, ಗ್ರಾಮಸ್ಥರಿಗೆ ಬಂದ್‍ನ ಬಿಸಿ ತಟ್ಟುವ ಲಕ್ಷಣ ಕಂಡು ಬರುತ್ತಿಲ್ಲ.

ಇನ್ನು ಜಿಲ್ಲಾ ವಾಣಿಜ್ಯೋದ್ಯಮಿಗಳ ಸಹಕಾರ ಸಂಘ ಬೆಲೆ ಏರಿಕೆಯನ್ನು ಖಂಡಿಸಿದೆಯಾದರೂ, ಬಂದ್‍ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಅಂಗಡಿ ಮುಂಗ ಟ್ಟುಗಳು ಎಂದಿನಂತೆ ತೆರೆದಿರಲಿವೆ. ಏರಿಕೆ ಯಾಗಿರುವ ಇಂಧನ ಬೆಲೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆಯನ್ನು ತಕ್ಷಣವೇ ಇಳಿಕೆ ಮಾಡುವಂತೆ ವಾಣಿಜ್ಯೋದ್ಯಮಿಗಳ ಸಂಘ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ. ಜಿಲ್ಲಾ ಆಟೋ ಚಾಲಕ ಮತ್ತು ಮಾಲೀಕರ ಸಂಘ ಭಾರತ್ ಬಂದ್‍ಗೆ ವಿರೋಧ ವ್ಯಕ್ತಪಡಿಸಿದ್ದು, ಎಂದಿ ನಂತೆ ಆಟೋರಿಕ್ಷಾಗಳನ್ನು ಜಿಲ್ಲೆಯಾದ್ಯಂತ ಸಂಚರಿಸಲು ತೀರ್ಮಾನಿಸಿದೆ.

ಒಟ್ಟಿನಲ್ಲಿ ನೈಸರ್ಗಿಕ ವಿಕೋಪದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಗೆ ಪ್ರಕೃತಿಯೇ ಬಂದ್ ಕರೆ ನೀಡಿದಂತಹ ಪರಿಸ್ಥಿತಿ ತಲೆದೋರಿರುವಾಗ ಭಾರತ್ ಬಂದ್‍ನ ಬಿಸಿ ಹೆಚ್ಚಾಗಿ ತಟ್ಟುವಂತೆ ಕಂಡು ಬರುತ್ತಿಲ್ಲ.

Translate »