ಆರ್‍ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ವರಸೆ
ಮೈಸೂರು

ಆರ್‍ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ವರಸೆ

October 15, 2020

ಬೆಂಗಳೂರು, ಅ.14(ಕೆಎಂಶಿ)- ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ನ ಆಟ ನಡೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆರ್‍ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈ ಬಾರಿ ನಾನು ನಿಷ್ಠಾವಂತ ಕಾರ್ಯಕರ್ತನ ಪರ ಇರ್ತೇನೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್.ಆರ್. ನಗರ 2008ರಲ್ಲಿ ರಚನೆಯಾಗಿತ್ತು. ಈವರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿದೆ ಎಂದರು.

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇದೇ ವೇಳೆ ಬಿಜೆಪಿ ವಿರುದ್ಧವೂ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ, ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

Translate »