ಕೈಗಾರಿಕಾ ಪ್ರದೇಶಕ್ಕೆ ರೈತರಿಂದ ಬಲವಂತವಾಗಿ ಜಮೀನು ಸ್ವಾಧೀನ ಇಲ್ಲ
News

ಕೈಗಾರಿಕಾ ಪ್ರದೇಶಕ್ಕೆ ರೈತರಿಂದ ಬಲವಂತವಾಗಿ ಜಮೀನು ಸ್ವಾಧೀನ ಇಲ್ಲ

December 7, 2022

ಬೆಂಗಳೂರು,ಡಿ. 6(ಕೆಎಂಶಿ)- ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ರೈತರಿಂದ ಬಲವಂತವಾಗಿ ಜಮೀನು ಭೂಸ್ವಾಧೀನ ಮಾಡುವುದಿಲ್ಲ ಎಂದು ಭಾರೀ ಕೈಗಾರಿಕೆ ಸಚಿವ ಮುರು ಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ಏರ್ಪ ಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಉದ್ದೇಶಗಳಿಗೆ ನಾವು ಯಾವುದೇ ರೈತರಿಂದಲೂ ಬಲವಂತ ವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳು ತ್ತಿಲ್ಲ. ಸ್ವಯಂಪ್ರೇರಿತರಾಗಿ ಯಾರು ಜಮೀನು ಕೊಡಲು ಮುಂದೆ ಬರುತ್ತಾರೋ ಅಂತಹವರಿಂದ ಮಾತ್ರ ಜಮೀನು ಪಡೆದುಕೊಳ್ಳುತ್ತಿದ್ದೇವೆ ಎಂದರು.

ಯಾವುದೇ ಕಾರಣಕ್ಕೂ ಕೃಷಿಯೋಗ್ಯ ಭೂಮಿ ಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕೆಲವು ಕಡೆ ರೈತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಜಮೀನನ್ನು ಮಾರುಕಟ್ಟೆ ದರದಂತೆ ಖರೀದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಕೆಲವು ಕಡೆ ಜಮೀನೇ ಇಲ್ಲದ ರೈತರು ಪ್ರತಿಭಟನೆ ನಡೆಸುತ್ತಾರೆ. ಇದರ ಹಿಂದೆ ರಾಜಕೀಯ ಉದ್ದೇಶವೂ ಇದೆ. ರಾಜ್ಯದಲ್ಲಿ ಇದುವರೆಗೂ ನಾವು ಕೈಗಾರಿಕೆಗಳಿಗೆ ಕೇವಲ ಶೇ. 0.61 ಭೂಮಿಯನ್ನು ಮಾತ್ರ ಬಳಸಿಕೊಂಡಿ ದ್ದೇವೆ ಎಂದು ಅಂಕಿ ಸಂಖ್ಯೆಗಳನ್ನು ವಿವರಿಸಿದರು.

ನವೆಂಬರ್ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳು ಮುಂದಿನ 5 ವರ್ಷಗಳಲ್ಲಿ ಶೇ.75ರಷ್ಟು ಅನುಷ್ಠಾನಕ್ಕೆ ಬರಲಿದ್ದು, ಯಾವುದೇ ರೀತಿಯ ಅನುಮಾನ ಬೇಡ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ನಾವು ಕೇವಲ ವೈಭವೀಕರಣ ಮಾಡಿಕೊಳ್ಳಲು ಅಥವಾ ಬಂಡ ವಾಳ ಹೆಚ್ಚಿಸಿಕೊಳ್ಳಲು ಇಲ್ಲವೇ ಅಂಕಿ-ಸಂಖ್ಯೆಗಳನ್ನು ತೋರಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿಲ್ಲ. ಯೋಜನೆಗಳನ್ನು ರಾಜ್ಯದಲ್ಲಿ ಪ್ರಾರಂಭಿಸುವ ವರಿಗೆ ಮಾತ್ರ ಅನುಮೋದನೆ ನೀಡಿದ್ದೇವೆ. ಇನ್ನು 5 ವರ್ಷದೊಳಗೆ ಶೇ.75ರಷ್ಟು ಎಂಓಯು ಅನುಷ್ಠಾನಕ್ಕೆ ಬರಲಿವೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು. ನವೆಂಬರ್ ತಿಂಗಳಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 9.81 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಯಾಗಿವೆ. ಉದ್ದಿಮೆಗಳಿಗೆ ಬೇಕಾದ ನೀರು, ಭೂಮಿ, ವಿದ್ಯುತ್, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಲು ಈಗಾಗಲೇ ಸಂಬಂಧಪಟ್ಟ ಇಲಾಖೆ ಗಳ ಜೊತೆ ಸಮನ್ವಯ ಸಮಿತಿಯನ್ನು ರಚಿಸಿದ್ದೇವೆ. ಇದು ನಮ್ಮ ನಿರೀಕ್ಷೆಗೂ ಮೀರಿ ಅನುಷ್ಠಾನವಾ ಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದರೂ ನಾವು ಅವರ ಜೊತೆ ಎಂಓಯು ಮಾಡಿಕೊಂಡಿಲ್ಲ. ಈಗಾಗಲೇ
ಮಾಡಿಕೊಂಡಿರುವ ತಿಳುವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಆದ್ಯತೆ ಕೊಡುತ್ತೇವೆ. ಕೇವಲ ಅಂಕಿ-ಸಂಖ್ಯೆಗಳನ್ನು ಹೆಚ್ಚಿಸಲು ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಮಾಣ ಪತ್ರ ಆಧಾರಿತ ತಿಳುವಳಿಕೆ ಮಾಡಿಕೊಂಡಿ ರುವವರ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂದರೆ ಯಾರು ನಮ್ಮ ರಾಜ್ಯದಲ್ಲಿ ಖಚಿತವಾಗಿ ಹೂಡಿಕೆ ಮಾಡಿ ಉದ್ಯಮಗಳನ್ನು ಆರಂಭಿಸುತ್ತಾರೋ ಅಂತಹವರಿಗೆ ಮಾತ್ರ ಆದ್ಯತೆ ಕೊಟ್ಟಿದ್ದೇವೆ. ಹಿಂದಿನ ಸರ್ಕಾರಗಳ ಕೆಲವು ತಪ್ಪುಗಳಿಂದಾಗಿ ಯೋಜನೆಗಳು ಅನುಷ್ಠಾನವಾಗಲಿಲ್ಲ ಎಂದು ನಿರಾಣಿ ಬೇಸರ ವ್ಯಕ್ತಪಡಿಸಿದರು. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಶೇ. 90ರಷ್ಟು ಟಯರ್-2 ಮತ್ತು 3 ನಗರಗಳಲ್ಲಿ ಹೂಡಿಕೆಯಾಗಿವೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಗಮನಹರಿಸಿದ್ದೇವೆ ಎಂದರು. ಮಂಗಳವಾರ ಕರ್ನಾಟಕ ಉದ್ಯೋಗ ಮಿತ್ರದಲ್ಲಿ ನಡೆದ 136ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ 59 ಯೋಜನೆಗಳಿಂದ 20627.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, ಇದರಿಂದ 80764 ಜನರಿಗೆ ಉದ್ಯೋಗಾವಕಾಶ ಲಭಿಸಲಿವೆ ಎಂದು ನಿರಾಣಿ ತಿಳಿಸಿದರು.
50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 852.06 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 3560 ಜನರಿಗೆ ಉದ್ಯೋಗ ಲಭಿಸಲಿದೆ. 15 ಕೋಟಿ ರೂ., 50 ಕೋಟಿ ರೂ. ಒಳಗಿನ 48 ಹೊಸ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದ್ದು, ಒಟ್ಟು 923.9 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 4444 ಜನರಿಗೆ ಉದ್ಯೋಗಗಳು ಸಿಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಂದ 852.73 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 1460 ಜನರಿಗೆ ಉದ್ಯೋಗ ಅವಕಾಶ ಸಿಗಲಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೊರೆಯನ್ನು ತಗ್ಗಿಸಿ ಎಥನಾಲ್ ಬಳಕೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ, ಇದರಿಂದ ಪರಿಸರ ಮತ್ತು ನಾಗರಿಕ ಸಮಾಜದ ಮೇಲೆ ಉಂಟಾಗುತ್ತಿದ್ದ ದುಷ್ಪರಿಣಾಮಗಳು ಕಡಿಮೆ ಆಗಲಿವೆ ಎಂದು ನಿರಾಣಿ ತಿಳಿಸಿದರು.

ಈಗಾಗಲೇ ಡೀಸೆಲ್ ಇಂಜಿನ್ ವಾಹನಗಳ ಆಮದನ್ನು ಬಂದ್ ಮಾಡಲಾಗಿದೆ. ವಾಹನಗಳನ್ನು ಬಯೋ ಫ್ಯೂಲ್ ಅಂದರೆ ಸ್ಥಳೀಯವಾಗಿ ದೊರೆಯುವ ಎಥನಾಲ್ ತೈಲದಿಂದ ವಾಹನಗಳನ್ನು ಚಾಲನೆ ಮಾಡಲು ಒತ್ತು ನೀಡಲಾಗುವುದು ಎಂದರು.

ಆಮದನ್ನು ಕಡಿಮೆ ಮಾಡಿ ರಫ್ತು ಹೆಚ್ಚಿಸಲು ಒತ್ತು ನೀಡುತ್ತಿದ್ದು ಮೇಕ್ ಇನ್ ಇಂಡಿಯಾಗೆ ಅನುವು ಮಾಡಿಕೊಡುವುದರಿಂದ ರಾಜ್ಯ ಇಡೀ ಪ್ರಪಂಚದಲ್ಲಿ ಬಲಿಷ್ಠವಾಗಿ ಹೊರಹೊಮ್ಮಲಿದೆ. ಸರ್ ಎಂ.ವಿಶ್ವೇಶ್ವರಯ್ಯ ಅವರ ಕನಸನ್ನು ಸಾಕಾರ ಮಾಡುವತ್ತ ನಮ್ಮ ಸರ್ಕಾರ ಸಾಗಿದೆ ಎಂದು ಹೇಳಿದರು.

Translate »