ನಾಳೆ ಕೊಡಗು ಬಂದ್ ಇಲ್ಲ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ
ಕೊಡಗು

ನಾಳೆ ಕೊಡಗು ಬಂದ್ ಇಲ್ಲ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ

September 9, 2018

ಮಡಿಕೇರಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಭಾರತ್ ಬಂದ್‍ಗೆ ಕರೆ ನೀಡಿವೆ. ಆದರೆ ಕೊಡಗಿನಲ್ಲಿ ಬಂದ್ ಆಚರಿಸು ವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಜನರ ಪರಿಸ್ಥಿತಿ ಗಂಭೀರವಾಗಿರುವುದರಿಂದ ಬಂದ್ ಕೈಬಿಡ ಲಾಗಿದೆ ಎಂದಿದ್ದಾರೆ. ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹತ್ತಾರು ಪ್ರಾಣ ಹಾನಿ ಸಂಬಂಧಿಸಿ, ಅನೇಕರು ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ನಿರಾ ಶ್ರಿತರಾಗಿದ್ದಾರೆ. ಸಂತ್ರಸ್ತರ ನೋವಿಗೆ ಸ್ಪಂದಿಸುವಲ್ಲಿ ಸರ್ಕಾರದೊಂದಿಗೆ ಜಿಲ್ಲಾ ಕಾಂಗ್ರೆಸ್ ಮುಂದಾಗಿರುವುದರಿಂದ ಕೊಡಗಿನಲ್ಲಿ ಬಂದ್ ಕೈಬಿಡಲಾಗಿದೆ ಎಂದಿರುವ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »