ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ
ಮೈಸೂರು

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ

May 3, 2022

ಶಿವಮೊಗ್ಗ, ಮೇ ೨-ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿಗೂ ಮುನ್ನ ರಾಜ್ಯದಲ್ಲಿ ನಾಯ ಕತ್ವ ಬದಲಾವಣೆ ಕುರಿತ ಊಹಾಪೋಹ ಗಳನ್ನು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟ ವಾಗಿ ತಳ್ಳಿಹಾಕಿದ್ದು, ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮಿತ್ ಶಾ ಅವರು ‘ಖೇಲೋ ಇಂಡಿಯಾ’ ಸಮಾರೋಪ ಸಮಾರಂಭ ಹಾಗೂ ಬಸವ ಜಯಂತಿ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು
ಆಗಮಿಸುತ್ತಿದ್ದಾರೆ. ನಾನು ಅವರನ್ನು ಭೇಟಿ ಮಾಡುತ್ತೇನೆ, ಅವರು ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ಮುಂದೆ ವಿಧಾನಸಭೆ ಚುನಾವಣೆ ಇರುವ ಕಾರಣ, ಪ್ರಧಾನಿ ಮತ್ತು ಅಮಿತ್ ಶಾ ಅವರು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು ನಿಗದಿಪಡಿಸಿರುವ ೧೫೦ ಸ್ಥಾನಗಳ ಗುರಿ ತಲುಪಲು ಸಲಹೆ ನೀಡಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳ ಕುರಿತು ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡುತ್ತಿದ್ದು, ನನ್ನ ಪ್ರಕಾರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು.

Translate »