ರಾಷ್ಟ್ರೀಯ ಶಿಕ್ಷಣ ನೀತಿ ಹಿಂದೆ ಯಾವ ದುರುದ್ದೇಶವೂ ಇಲ್ಲ
News

ರಾಷ್ಟ್ರೀಯ ಶಿಕ್ಷಣ ನೀತಿ ಹಿಂದೆ ಯಾವ ದುರುದ್ದೇಶವೂ ಇಲ್ಲ

August 19, 2021

ಬೆಂಗಳೂರು, ಆ.18(ಕೆಎಂಶಿ)- ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿಂದೆ ವಿದ್ಯಾರ್ಥಿ ಹಿತಬಿಟ್ಟು ಯಾವುದೇ ದುರುದ್ದೇಶ ಅಥವಾ ಹಿಡೆನ್ ಅಜೆಂಡಾ ಇಲ್ಲವೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾ ಯಣ ಇಂದಿಲ್ಲಿ ಸ್ಪÀಷ್ಟಪಡಿಸಿದರು.

ಆಗಸ್ಟ್ 23ರಿಂದ ಹೊಸ ಶಿಕ್ಷಣ ನೀತಿ ಯಡಿ ಕಲಿಕೆಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದೆಂದು ಪ್ರಕ ಟಿಸಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾ ಲಯ ಹಾಗೂ ಕ್ರಿಸ್ತು ಜಯಂತಿ ಕಾಲೇಜು ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 ಅನುಷ್ಠಾನ ಕುರಿತು ಹಮ್ಮಿಕೊಳ್ಳ ಲಾಗಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವೇಶ ಪ್ರಕ್ರಿಯೆಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವರು ಎಂದರು.

ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡದೇ ಅಥವಾ ಅದನ್ನು ಸರಿಯಾಗಿ ಗ್ರಹಿಸದೇ ಟೀಕೆ ಮಾಡುವುದು ಸರಿಯಲ್ಲ. ಶಿಕ್ಷಣ ನೀತಿಯನ್ನು ವಿರೋಧ ಮಾಡುವುದೂ ದೇಶದ ಅಭಿವೃದ್ಧಿಯನ್ನು ವಿರೋಧಿಸುವುದು ಎರಡೂ ಒಂದೇ ಎಂದು ಸಚಿವರು ಅಭಿಪ್ರಾಯಪಟ್ಟರು.
ವಿಶಾಲ ತಳಹದಿ ಹಾಗೂ ವಿಶಾಲ ದೃಷ್ಟಿಕೋನದಿಂದ ರೂಪಿತವಾಗಿರುವ ಶಿಕ್ಷಣ ನೀತಿ ಯಲ್ಲಿ ಬಹು ಆಯ್ಕೆಯ ಕಲಿಕೆಗೆ ವಿಫುಲ ಅವಕಾಶವಿದೆ. ಇಷ್ಟು ದಿನ ನಾವು ಹೇಳಿದ್ದನ್ನು ವಿದ್ಯಾರ್ಥಿ ಗಳು ಕಲಿಯುತ್ತಿದ್ದರು. ಮಕ್ಕಳ ಪರಿ ಪೂರ್ಣ ವಿಕಾಸಕ್ಕೆ ಅವಕಾಶ ಇರಲಿಲ್ಲ. ಇನ್ನು ಮುಂದೆ ಅವರ ಇಚ್ಛೆಯ ವಿಷಯ ವನ್ನು ಕಲಿಯಲಿದ್ದಾರೆಂದ ಅವರು; ಸಾಮಾ ಜಿಕ, ಆರ್ಥಿಕ ಹಾಗೂ ಇತರೆ ಯಾವುದೇ ಕ್ಷೇತ್ರವೇ ಇರಲಿ ದೇಶ ಎದುರಿಸುತ್ತಿರುವ ಪ್ರತಿಯೊಂದು ಸವಾಲಿಗೂ ಶಿಕ್ಷಣ ನೀತಿ ಯಲ್ಲಿ ಉತ್ತರವಿದೆ ಎಂದರು.

ಯಾವುದೇ ದೇಶ, ಯಾವುದೇ ಹಂತದಲ್ಲಿ ಹಾಗೂ ಯಾವುದೇ ಸಮಸ್ಯೆ ಯನ್ನು ಎದುರಿಸುತ್ತಿದ್ದರೂ ಅದನ್ನು ನಿರಾಯಾಸವಾಗಿ ಬಗೆ ಹರಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರವೇ ಇದೆ ಎಂಬುದು ನನ್ನ ಅಚಲ ನಂಬಿಕೆ. ಶಿಕ್ಷಣ ಇಲ್ಲದೆ ಅಭಿ ವೃದ್ಧಿ ಎನ್ನುವುದು ಮರೀಚಿಕೆ. ಆಮೂಲಾಗ್ರ ಮತ್ತು ರಚನಾತ್ಮಕ ಪ್ರಗತಿ ಸಾಧಿಸಬೇಕಿದ್ದರೆ ಶಿಕ್ಷಣಕ್ಕೆ ಒತ್ತು ನೀಡಲೇಬೇಕು. ಈ ನಿಟ್ಟಿನಲ್ಲಿ ಜರ್ಮನಿ, ದಕ್ಷಿಣ ಕೊರಿಯಾ, ಜಪಾನ್‍ನಂಥ ಚಿಕ್ಕ ಚಿಕ್ಕ ದೇಶಗಳು ಅದ್ಭುತಗಳನ್ನೇ ಸೃಷ್ಟಿ ಮಾಡಿವೆ ಎಂದು ಹೇಳಿದರು.

ಶಿಕ್ಷಣ ಸಂಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಬೇಕು. ವಿದ್ಯಾರ್ಥಿ ಕೇಂದ್ರಿತ ವ್ಯವಸ್ಥೆ ಅಲ್ಲಿರಬೇಕು. ಮುಂದಿನ ಅನೇಕ ವರ್ಷಗಳ ಮುನ್ನೋಟ ಇಟ್ಟುಕೊಂಡು ಸಂಸ್ಥೆಗಳನ್ನು ಕಟ್ಟಿ ಬೆಳೆಸಬೇಕು. ಅದಕ್ಕಾಗಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿ ಸಬೇಕು. ಇಂಥ ಸಂಸ್ಥೆಗಳನ್ನು ಆಮೂಲಾ ಗ್ರವಾಗಿ ಬೆಳೆಸಲು ನೆರವಾಗಬೇಕು. ಯಾವುದೇ ಶಿಕ್ಷಣ ಸಂಸ್ಥೆಯೂ ಲಾಭ ಗಳಿಕೆಗಾಗಿ ಕೆಲಸ ಮಾಡಿಲ್ಲ, ಮಾಡು ವುದೂ ಇಲ್ಲ ಎಂದು ಡಾ.ಅಶ್ವತ್ಥ ನಾರಾಯಣ ನುಡಿದರು.

ನಮ್ಮ ದೇಶದ ಜನಸಂಖ್ಯೆ ಈಗ 130 ಕೋಟಿ ಮೀರುತ್ತಿದೆ. ಅದೇ ಪ್ರಮಾಣದಲ್ಲಿ ಸವಾಲುಗಳು, ಅಗತ್ಯಗಳು ಹೆಚ್ಚುತ್ತಿವೆ. ಇವೆಲ್ಲವನ್ನೂ ಎದುರಿಸಿ ಗೆಲ್ಲಬೇಕಾದರೆ ನಮಗೆ ಎದುರಿಗಿರುವ ಏಕೈಕ ಸಾಧನ ವೆಂದರೆ ಶಿಕ್ಷಣ ಮಾತ್ರ ಎಂದು ಸಚಿವರು ಪ್ರತಿಪಾದಿಸಿದರಲ್ಲದೆ, ಶಿಕ್ಷಣ ನೀತಿ ಜಾರಿ ದಿಕ್ಕಿನಲ್ಲಿ ಇಂಥ ಅತ್ಯುತ್ತಮ ವಿಚಾರ ಸಂಕಿ ರಣವನ್ನು ಮೊತ್ತ ಮೊದಲು ಆಯೋ ಜಿಸಿದ ಬೆಂಗಳೂರು ಉತ್ತರ ವಿವಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Translate »