ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನ ಕಡಿತ ಬೇಡ ಸಿಎಂ ಯಡಿಯೂರಪ್ಪರಿಗೆ ಕುಮಾರಸ್ವಾಮಿ ಮನವಿ
ಮೈಸೂರು

ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನ ಕಡಿತ ಬೇಡ ಸಿಎಂ ಯಡಿಯೂರಪ್ಪರಿಗೆ ಕುಮಾರಸ್ವಾಮಿ ಮನವಿ

August 26, 2020

ಬೆಂಗಳೂರು, ಆ.25(ಕೆಎಂಶಿ)-ಹಿಂದಿನ ಸರ್ಕಾರದಲ್ಲಿ ಪಕ್ಷಾತೀತ ವಾಗಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮ ಗಾರಿಗಳಿಗೆ ಘೋಷಿಸ ಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಜೆಡಿಎಸ್ ಶಾಸ ಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದ ಎಲ್ಲಾ ಶಾಸಕರುಗಳಿಗೆ ನೀಡ ಲಾಗಿದ್ದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಮೂಲಕ ಔದಾರ್ಯ ಪ್ರದರ್ಶಿಸುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೋರಿದ್ದಾರೆ.

ಕೊರೊನಾ ಸಂಕಷ್ಟ ಸಮಯದಲ್ಲಿ ಹಾಗೂ ಲಾಕ್‍ಡೌನ್ ನಂತರ ಜನಜೀವನ ತತ್ತರ ಗೊಂಡಿದ್ದರೆ, ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿವೆ. ಈ ಪರಿಸ್ಥಿತಿಯನ್ನು ಮನಗಂಡು ಮುಖ್ಯಮಂತ್ರಿಗಳು ವಿಧಾನ ಸಭಾ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಮೂಲಕ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು. ಆರ್ಥಿಕ ಸಂಪ ನ್ಮೂಲ ಸರಿದೂಗಿಸಿಕೊಂಡು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಒದಗಿಸ ಬೇಕು ಎಂದು ಎಚ್ಡಿಕೆ ಹೇಳಿದ್ದಾರೆ.

Translate »