ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ
ಮೈಸೂರು

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

October 25, 2018

ಮೈಸೂರು:  ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ತಮ್ಮ ರಾಜೀನಾಮೆ ವದಂತಿಗೆ ಅಡಗೂರು ವಿಶ್ವನಾಥ್ ಬುಧವಾರ ಮೈಸೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ನೀಡಿದ ಸ್ಪಷ್ಟನೆ ಇದು.

ವೈಯಕ್ತಿಕ ಕಾರಣಕ್ಕೆ ಯಾರಾದರೂ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದ ಅವರು, ಪಕ್ಷದಲ್ಲಿ ತಾವು ಉತ್ತಮವಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದರು. ನಾನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದೆ. ಆ ವೇಳೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನನ್ನೊಂದಿಗೆ ಮಾತನಾಡಿದ್ದಾರೆ. ವೈದ್ಯರೊಂದಿಗೂ ಚರ್ಚಿಸಿದ್ದಾರೆ. ಹೀಗಿದ್ದೂ ಯಾರೋ ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸ ಲಿಲ್ಲ ಎಂದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ನಾನು ನಿನ್ನೆಯಷ್ಟೆ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಕುಳಿತು ಕೆಲಸ ಮಾಡಿದ್ದೇನೆ. ಪಕ್ಷದ ಕಾರಿನಲ್ಲಿ ಮೈಸೂರಿಗೆ ಬಂದಿದ್ದೇನೆ. ಅ.28ರಿಂದ ಶಿವಮೊಗ್ಗದಲ್ಲಿ ಪ್ರಚಾರ ಆರಂಭಿಸಲಿದ್ದೇನೆ ಎಂದು ಹೇಳುವ ಮೂಲಕ ರಾಜೀನಾಮೆ ವದಂತಿಗೆ ತೆರೆ ಎಳೆದರು.

Translate »