ಜೆಡಿಎಸ್‍ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ
ಕೊಡಗು

ಜೆಡಿಎಸ್‍ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

March 13, 2019

ಮಡಿಕೇರಿ: ಕೊಡಗು ಜಿಲ್ಲೆ ಯಲ್ಲಿ ತಳಮಟ್ಟದಿಂದ ಜೆಡಿಎಸ್ ಪಕ್ಷ ವನ್ನು ಕಟ್ಟಿ ಬೆಳೆಸಿದ್ದು, ಪಕ್ಷಕ್ಕೆ ರಾಜೀ ನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ, ಜಿಲ್ಲಾ ಜೆಡಿಎಸ್ ಮುಖಂಡ ಬಿ.ಎ. ಜೀವಿಜಯ ಸ್ಪಷ್ಟ ಪಡಿಸಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಅಸಮಾಧಾನಗೊಂಡ ಜೀವಿಜಯ, ಸೋಮವಾರ ಪಕ್ಷಕ್ಕೆ ರಾಜಿನಾಮೆ ಸಲ್ಲಿ ಸುವುದಾಗಿ ಹೇಳಿಕೆ ನೀಡಿದ್ದರು. ಇದೀಗ ಪಕ್ಷಕ್ಕೆ ರಾಜೀ ನಾಮೆ ಸಲ್ಲಿಸುವ ಪ್ರಮೇ ಯವೇ ಇಲ್ಲವೆಂದು ಹೇಳುವ ಮೂಲಕ “ಯೂ ಟರ್ನ್” ಹೊಡೆದಿದ್ದಾರೆ.

ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ತಮ್ಮ ಮಾತಿಗೆ ಮನ್ನಣೆ ನೀಡದೆ ಕೆ.ಎಂ.ಗಣೇಶ್ ಅವರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಿದ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ್ದ ಜೀವಿಜಯ, ಪಕ್ಷದ ಕಾರ್ಯ ಕರ್ತರೊಂದಿಗೆ ಸಭೆ ನಡೆಸಿ, ಪಕ್ಷಕ್ಕೆ ರಾಜಿನಾಮೆ ನೀಡುವುದಾಗಿ ಹೇಳಿ ಕೊಂಡಿದ್ದರು. ಈ ಹಿನ್ನಲೆಯಲ್ಲಿ ಮಂಗ ಳವಾರ ಮಡಿಕೇರಿಯಲ್ಲಿ ಸುದ್ದಿಗೋಷ್ಟಿ ನಡೆ ಸುವ ಮೂಲಕ ಅಧಿಕೃತವಾಗಿ ಘೋಷಿ ಸುವುದಾಗಿ ಪಕ್ಷದ ಮೂಲಗಳು ತಿಳಿಸಿದ್ದವು.

ಅದರಂತೆ ಮಂಗಳವಾರ ನಗರದ ಪತ್ರಿಕಾ ಭವನದವರೆಗೆ ಬಂದ ಜೀವಿಜಯ ಸುದ್ದಿಗೋಷ್ಟಿಗೆ ಬರಲು ಹಿಂದೇಟು ಹಾಕಿ ದರು. ಈ ಕುರಿತು ಜೀವಿಜಯ ಅವರನ್ನು ಪತ್ರಕರ್ತರು ಪ್ರಶ್ನಿಸಿದಾಗ, ಜೆಡಿಎಸ್ ವರಿ ಷ್ಠರು ಪಕ್ಷದ ಪ್ರಮುಖರೊಂದಿಗೆ ದೂರ ವಾಣಿಯಲ್ಲಿ ಮಾತನಾಡಿ, 2 ದಿನದಲ್ಲಿ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಪಕ್ಷಕ್ಕೆ ರಾಜೀನಾಮೆ ನೀಡುವ ವಿಚಾ ರದ ಕುರಿತು ಪ್ರಶ್ನಿಸಿದಾಗ ಜಿಲ್ಲೆಯಲ್ಲಿ 1977ರಿಂದಲೂ ಪಕ್ಷವನ್ನು ತಳ ಮಟ್ಟದಿಂದ ಕಟ್ಟಿ ಬೆಳೆಸಲಾಗಿದೆ. ನಾನೂ ಸೇರಿದಂತೆ ಮತ್ಯಾರೂ ರಾಜೀನಾಮೆ ನೀಡೋದಿಲ್ಲ. ನಾವು ಕಟ್ಟಿದ ಮನೆಯೊ ಳಗೆ ಬೇರೆಯವರು ಸೇರಿಕೊಂಡಿದ್ದಾರೆ. ಪಕ್ಷ ವಿರೋಧಿ ಕೆಲಸ ಮಾಡಿದವರನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಜಿಲ್ಲಾಧ್ಯಕ್ಷ ರನ್ನು ಬದಲಾಯಿಸುವಂತೆ ಒತ್ತಡ ಹೇರ ಲಾಗಿದೆ ಎಂದು ಜೀವಿಜಯ ಹೇಳಿದರು.

ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇ ಗೌಡ ಅವರು ಕೊಡಗುಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿ ಯಿಸಿದ ಜೀವಿಜಯ, ಈ ವಿಚಾರ ನನಗೆ ಗೊತ್ತಿಲ್ಲ. ಈ ಕುರಿತು ಅಂತಿಮ ನಿರ್ಧಾರ ವಾಗಿಲ್ಲ ಎಂದಷ್ಟೇ ಉತ್ತರಿಸಿದರು.

Translate »