ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ
ಮೈಸೂರು

ಕೋವಿಡ್ ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ

March 18, 2021

ಹೆಚ್.ಡಿ.ಕೋಟೆ, ಮಾ. 17(ಮಂಜು)-ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ ಎಂದು ಜಿಪಂ ಅಧ್ಯಕ್ಷೆ ಪರಿ ಮಳಾ ಶ್ಯಾಂ ತಿಳಿಸಿದರು. ತಾಲೂಕಿನ ಹ್ಯಾಂಡ್ ಪೆÇೀಸ್ಟ್ ಸರ್ಕಲ್ ನಲ್ಲಿ ಕೋವಿಡ್ ಲಸಿಕೆ ಅಭಿಯಾನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದು. ಲಸಿಕೆ ಪಡೆದ ನಂತರವೂ ಕೋವಿಡ್ ನಿಯಮ ಗಳನ್ನು ತಪ್ಪದೇ ಪಾಲಿಸಬೇಕು. ಆರೋಗ್ಯ ಇಲಾಖೆ ಲಸಿಕೆ ವಿಚಾರವಾಗಿ ಎಲ್ಲಾ ತರದ ಸೌಲಭ್ಯ ಒದಗಿಸಿಕೊಡುತ್ತಿದೆ. ತಪ್ಪದೇ ಎಲ್ಲರೂ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ರವಿ ಕುಮಾರ್, ವಿವೇಕಾನಂದ ಆಸ್ಪತ್ರೆಯ ಡಾ.ಡೆನ್ನಿಸ್, ತಹಸೀಲ್ದಾರ್ ನರಗುಂದ, ಕ್ಷೇತ್ರಶಿಕ್ಷಣಾಧಿಕಾರಿ ರೇವಣ್ಣ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಉದಯಕುಮಾರ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ರಂಗಸ್ವಾಮಿ ಮತ್ತಿತರರಿದ್ದರು.

Translate »