ಡ್ರಗ್ಸ್ ದಂಧೆ ವಿಚಾರದಲ್ಲಿ ರಾಜಕೀಯ ಬೇಡ
ಮೈಸೂರು

ಡ್ರಗ್ಸ್ ದಂಧೆ ವಿಚಾರದಲ್ಲಿ ರಾಜಕೀಯ ಬೇಡ

September 13, 2020

ಕೊಳ್ಳೇಗಾಲ, ಸೆ.12(ನಾಗೇಂದ್ರ)- ಡ್ರಗ್ಸ್ ದಂಧೆ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡ ಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, `ಡ್ರಗ್ಸ್ ಯುವ ಜನಾಂಗದವರನ್ನು ನಾಶ ಮಾಡು ತ್ತಿದೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಇದರ ವಿರುದ್ಧ ಹೋರಾಡ ಬೇಕು. ಡ್ರಗ್ಸ್ ದಂಧೆಯ ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಸರ್ಕಾರ ಒಳ್ಳೆಯ ನಿರ್ಧಾರ ತೆಗೆದು ಕೊಂಡು ಉತ್ತಮವಾಗಿ ಕಾರ್ಯನಿರ್ವ ಹಿಸುತ್ತಿದೆ. ಯಾವ ತನಿಖೆಗೂ ಯಾರ ವಿರೋಧವೂ ಇಲ್ಲ. ನಾವು ಪೆÇಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ’ ಎಂದರು.

ರಾಜಕೀಯ ಭೇಟಿ ಅಲ್ಲ: ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, `ಯಾರು ಬೇಕಾದರೂ ಮತ್ತು ಯಾವ ಪಕ್ಷದ ಮುಖಂಡರಾ ದರೂ ಮುಖ್ಯಮಂತ್ರಿಯವರನ್ನು ಭೇಟಿ ಮಾಡಬಹುದು. ಅದರಲ್ಲಿ ಏನು ತಪ್ಪಿದೆ? ಇದರಲ್ಲಿ ಯಾವ ರಾಜಕೀಯವೂ ಅಲ್ಲ. ದಾಸರ ಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ತುರ್ತಾಗಿ ಹಣ ಬಿಡುಗಡೆ ಮಾಡಿ ಕ್ಷೇತ್ರದ ಜನರಿಗೆ ಅನುಕೂಲ ಕಲ್ಪಿಸಿ ಎಂದು ಮನವಿ ಮಾಡುವುದಕ್ಕೆ ಬಂದಿದ್ದರು. ಇದರಲ್ಲಿ ಯಾವ ರಾಜಕೀಯವೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ’ ಎಂದರು.

 

ಡ್ರಗ್ಸ್: ಮತ್ತಿಬ್ಬರು ಆರೋಪಿಗಳ ಬಂಧನ
ಬೆಂಗಳೂರು, ಸೆ. 12- ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೆÇಲೀಸರು ವಿರೇನ್ ಖನ್ನಾ ಸಹಚರ ಸೇರಿ ಮತ್ತಿಬ್ಬರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಮಂಗಳೂರಿನ ಪ್ರತೀಕ್ ಶೆಟ್ಟಿ ಹಾಗೂ ಹರಿಯಾಣ ಮೂಲಕ ಆದಿತ್ಯ ಅಗರ್ವಾಲ್ ಎಂಬುವವರನ್ನು ಸಿಸಿಬಿ ಪೆÇಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿಕ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ತನಿಖಾ ತಂಡ ವಶಕ್ಕೆ ಪಡೆದಿದೆ. ಎಂಜಿನಿಯ ರಿಂಗ್ ಪದವೀಧರನಾಗಿರುವ ಪ್ರತೀಕ್ ಮೂಲತಃ ಮಂಗಳೂರಿ ನವನಾಗಿದ್ದಾರೆ. 4 ವರ್ಷಗಳ ಹಿಂದೆ ಕೆಲಸ ಅರಸಿ ನಗರಕ್ಕೆ ಬಂದಿದ್ದ ಆರೋಪಿ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಸಾಫ್ಟ್‍ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಮಾದಕ ವಸ್ತು ಸೇವನೆ ಚಟಕ್ಕೆ ಬಿದ್ದಿದ್ದ ಆರೋಪಿಗೆ ಆಫ್ರಿಕನ್ ಪ್ರಜೆಗಳು ನೇರವಾಗಿ ಸಂಪರ್ಕಕ್ಕೆ ಬಂದಿದ್ದರು. ಮಾಸಿಕ 1 ಲಕ್ಷ ರೂ.ವೇತನ ಬಿಟ್ಟು ಆರೋಪಿ ಸುಲಭವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ತಾನೇ ಮಾದಕ ವಸ್ತು ಮಾರಾಟಕ್ಕೆ ಇಳಿದಿದ್ದ. ತನ್ನ ಜಾಲದ ನಂಟನ್ನು ದೊಡ್ಡದಾಗಿಸಿಕೊಂಡಿದ್ದ. ಕೊಕೋನ್, ಅಫೀಮು, ಗಾಂಜಾ, ಎಂಡಿಎಂ ಸೇರಿದಂತೆ ಎಲ್ಲಾ ರೀತಿಯ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. 2018ರಲ್ಲಿ ಬೆಂಗಳೂರಿನ ಬಾಣಸವಾಡಿ ಪೆÇಲೀಸರಿಂದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ. ಪೆÇಲೀಸರು ಆರೋಪಿಯನ್ನು ಬಂಧಿಸಿ, ಜೈಲಿ ಗಟ್ಟಿದ್ದರು. ಜೈಲಿನಿಂದ ಹೊರಬಂದ ಬಳಿಕವೂ ಆರೋಪಿ ತನ್ನ ದಂಧೆ ನಿಲ್ಲಿಸಿರಲಿಲ್ಲ ಎಂದು ತಿಳಿದುಬಂದಿದೆ.

ಪೇಜ್ ತ್ರಿ ಪಾರ್ಟಿಯಲ್ಲಿ ಪಾಲ್ಗೊಳ್ಳುತ್ತಿದ್ದ ರಾಗಿಣಿಗೆ ಪ್ರತೀಕ್ ಶೆಟ್ಟಿ ಸಂಪರ್ಕಕ್ಕೆ ಬಂದಿದ್ದ. ಆರೋಪಿ ರವಿಶಂಕರ್ ಹಾಗೂ ರಾಗಿಣಿಗೆ ಆಪ್ತನಾಗಿದ್ದ. ಯಾವುದೇ ಪಾರ್ಟಿ ಆಯೋಜನೆಯಾದರೂ ಪ್ರತೀಕ್ ಶೆಟ್ಟಿ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ. ಸೆಲೆಬ್ರೆಟಿಗಳು, ಉದ್ಯಮಿಗಳು ಹಾಗೂ ಶ್ರೀಮಂತರ ಮಕ್ಕಳಿಗೆ ಡ್ರಗ್ಸ್ ಪೂರೈಸುತ್ತಿದ್ದ. ವೀರೇನ್ ಖನ್ನಾನ ಜೊತೆಗೂ ಹೆಚ್ಚಿನ ನಂಟು ಹೊಂದಿದ್ದಾನೆ.

Translate »